ಕರ್ನಾಟಕ

karnataka

ಬೆಂಗಳೂರು ಬಂದ್: ಯಾವುದೇ ಅಹಿತಕರ ಘಟನೆ ನಡೆದಿಲ್ಲ - ಪೊಲೀಸ್ ಕಮಿಷನರ್ ದಯಾನಂದ ಮಾಹಿತಿ

By ETV Bharat Karnataka Team

Published : Sep 26, 2023, 7:38 PM IST

ಬಸ್​ ಮೇಲೆ ಕಲ್ಲು ತೂರಾಟ, ಬಲವಂತವಾಗಿ ಅಂಗಡಿ ಮುಚ್ಚುವಂತದ್ದು ಯಾವುದೂ ನಡೆದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಹೇಳಿದ್ದಾರೆ.

Commissioner of Police Dayananda
ಪೊಲೀಸ್ ಕಮಿಷನರ್ ದಯಾನಂದ

ಪೊಲೀಸ್ ಕಮಿಷನರ್ ದಯಾನಂದ

ಬೆಂಗಳೂರು:ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳು ಇಂದು ಕರೆ ನೀಡಿದ್ದ ಬೆಂಗಳೂರು ಬಂದ್ ವೇಳೆ ನಗರದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಸ್ಪಷ್ಟಪಡಿಸಿದ್ದಾರೆ.

ಕಾವೇರಿ ವಿಚಾರಕ್ಕಾಗಿ ವಿವಿಧ ವರ್ಗದ ಮುಖಂಡರು ಬೆಂಗಳೂರು ಬಂದ್​ಗೆ ಕರೆ ನೀಡಿದ್ದರು. ಕಾನೂನು ಸುವ್ಯವಸ್ಥೆ ಕಾಪಾಡಲು ಆಯಕಟ್ಟಿನ ಜಾಗಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಎಲ್ಲಿಯೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿಲ್ಲ. ಕೆಲವು ಸಂಘಟನೆಗಳು, ಮುಖಂಡರು, ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದರು. 144 ಸೆಕ್ಷನ್ ಜಾರಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಬಿಜೆಪಿಯ ಒಬ್ಬ ಎಂಎಲ್ಎ ಹಾಗೂ ಇಬ್ಬರು ಎಂಎಲ್​ಸಿಗಳನ್ನು ವಶಕ್ಕೆ ಪಡೆಯಲಾಗಿತ್ತು. ನಂತರ ಅವರೆಲ್ಲರನ್ನೂ ಬಿಡುಗಡೆ ಮಾಡಲಾಗಿದೆ.

ಫ್ರೀಡಂ ಪಾರ್ಕ್​ನಲ್ಲಿ ಕೆಲವು ಸಂಘಟನೆಗಳು ಪ್ರತಿಭಟನೆಯನ್ನು ಕೈಗೊಂಡಿದ್ದವು. ಮೊದಲೇ ತಿಳಿಸಿದಂತೆ ಅವರಿಗೆ ಅವಕಾಶ ಮಾಡಿಕೊಡಲಾಗಿತ್ತು. ಸಚಿವ ರಾಮಲಿಂಗಾರೆಡ್ಡಿ ಅವರು ಅಲ್ಲಿಗೆ ಬಂದು ಅವರಿಂದ ಮನವಿ ಸ್ವೀಕರಿಸಿದ್ದು, ನಂತರ ಅವರೂ ಕೂಡ ಅಲ್ಲಿಂದ ತೆರಳಿದ್ದಾರೆ. ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತದ್ದಾಗಲಿ, ಬಸ್​ಗಳಿಗೆ ಕಲ್ಲು ತೂರಾಟ ಮಾಡುವಂತಹದ್ದಾಗಲಿ, ಬೆಳಗ್ಗೆಯಿಂದ ಸಂಜೆವೆರೆಗೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದರು.

ಬಿಎಂಟಿಸಿ ಸೇರಿದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗಿಲ್ಲ. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೋಟೆಲ್ ಒಂದಕ್ಕೆ ನುಗ್ಗಿ ದಾಂಧಲೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಆಯುಕ್ತರು ಬೈಕ್ ರ‍್ಯಾಲಿ ಮಾಡಲು ಮುಂದಾಗಿದ್ದರು. ಇದಕ್ಕೂ ಮೊದಲು ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ತಮಿಳುನಾಡು ಬಸ್ ಸಂಚಾರವನ್ನು ಅವರೇ ನಿಲ್ಲಿಸಿದ್ದರು. ಈ ಬಗ್ಗೆ‌ ಹೆಚ್ಚಿನ ಮಾಹಿತಿ ಇನ್ನಷ್ಟೇ ಅಧಿಕಾರಿಗಳಿಂದ ತರಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಪ್ರತಿಭಟನೆಗೆ ಮುಂದಾದ ಬಿಜೆಪಿ, ಜೆಡಿಎಸ್ ಮುಖಂಡರು, ಕಾರ್ಯರ್ತರನ್ನು ವಶಕ್ಕೆ ಪಡೆದ ಪೊಲೀಸರು

ABOUT THE AUTHOR

...view details