ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣದಲ್ಲಿ ತಮ್ಮ ಬಂಧನ ಪ್ರಶ್ನಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಐಎಂಎ ಕಂಪನಿ ಮಾಲೀಕ ಮೊಹಮ್ಮದ್ ಮನ್ಸೂರ್ ಪರವಾಗಿ ವರದಿ ನೀಡಲು 1.5 ಕೋಟಿ ರೂ. ಲಂಚ ಪಡೆದ ಆರೋಪದಡಿ ವಿಶೇಷ ತನಿಖಾ ತಂಡ (ಎಸ್ಐಟಿ) ಸೋಮವಾರ ವಿಜಯ್ ಶಂಕರ್ ಅವರನ್ನು ಬಂಧಿಸಿತ್ತು.
ತಮ್ಮ ಬಂಧನ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಬೆಂಗಳೂರು ನಗರ ಡಿಸಿ - undefined
ಬಹುಕೋಟಿ ವಂಚನೆ ಪ್ರಕರಣದಲ್ಲಿ ತಮ್ಮ ಬಂಧನ ಪ್ರಶ್ನಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ವಿಜಯ್ ಶಂಕರ್
ಎಸ್ಐಟಿ ವಿಚಾರಣೆ ರದ್ದುಪಡಿಸುವಂತೆ ಆರೋಪಿ ಪರ ವಕೀಲ ಬಾಲಾಜಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. 'ಐಎಂಎ ವಂಚನೆ ಪ್ರಕರಣದಲ್ಲಿ ಪೊಲೀಸರು ನೀಡಿರುವ ನೋಟಿಸ್ಗೆ ಮಧ್ಯಂತರ ತಡೆ ನೀಡಬೇಕು. ಪ್ರಕರಣದಲ್ಲಿ ಆರೋಪಿ ವಿರುದ್ಧ ದಾಖಲಾಗಿರುವ ಎಫ್ಐಆರ್ ವಜಾಗೊಳಿಸಿಬೇಕು ಹಾಗೂ ಅಧೀನ ನ್ಯಾಯಾಲಯದಲ್ಲಿ ನಡೆಯುವ ಪ್ರಕರಣದ ವಿಚಾರಣೆ ರದ್ದು ಮಾಡಬೇಕು' ಎಂದು ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಈ ಬಗ್ಗೆ ದಾಖಲೆ ಸಂಗ್ರಹಿಸಿದ್ದ ಎಸ್ಐಟಿ ಅಧಿಕಾರಿಗಳು, ನಿನ್ನೆ ಮಧ್ಯಾಹ್ನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.