ಬೆಂಗಳೂರು:ನಗರದಲ್ಲಿ ಇಂದು 3,552 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. 21 ಮಂದಿ ಮೃತಪಟ್ಟಿದ್ದು, ಈವರೆಗೆ 2,391 ಜನ ಸೋಂಕಿಗೆ ಬಲಿಯಾಗಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಇಂದು 3,552 ಮಂದಿಗೆ ಕೊರೊನಾ ಪಾಸಿಟಿವ್; 21 ಮಂದಿ ಸಾವು - Bangalore city covid report
ಬೆಂಗಳೂರಿನಲ್ಲಿ ಮಹಾಮಾರಿ ಕೊರೊನಾ ಇಂದು 21 ಜನರನ್ನು ಬಲಿ ತೆಗೆದುಕೊಂಡಿದೆ. ಕಳೆದ 24 ಗಂಟೆಗಳಲ್ಲಿ 3,538 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ವರದಿ ಬಂದಿದೆ.
ಬೆಂಗಳೂರು
ಒಟ್ಟು ಕೋವಿಡ್ ಪಾಸಿಟಿವ್ ಸಂಖ್ಯೆ 1,67,183ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 3,538 ಮಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 1,23,862 ಮಂದಿ ಚೇತರಿಸಿಕೊಂಡಿದ್ದಾರೆ.
ನಗರದಲ್ಲಿ ಒಟ್ಟು 40,929 ಸಕ್ರಿಯ ಪ್ರಕರಣಗಳಿವೆ. 278 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Last Updated : Sep 12, 2020, 10:20 PM IST