ಬೆಂಗಳೂರು:ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲಾಗುವಂತಹ ಘಟನೆಗಳು ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ ಎಂದು ನಗರದ ಎಲ್ಲಾ ಡಿಸಿಪಿಗಳಿಗೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚನೆ ನೀಡಿದ್ದಾರೆ.
ಬಕ್ರೀದ್ ಹಬ್ಬ ಶಾಂತಿಯುತವಾಗಿ ನಡೆಯುವಂತೆ ಕ್ರಮ ಕೈಗೊಳ್ಳಿ: ಡಿಸಿಪಿಗಳಿಗೆ ಕಮೀಷನರ್ ಸೂಚನೆ - ಡಿಸಿಪಿ
ಬಕ್ರೀದ್ ಹಬ್ಬ ಶಾಂತಿಯುತವಾಗಿ ನಡೆಯುವಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಡಿಸಿಪಿಗಳಿಗೆ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚನೆ ನೀಡಿದ್ದಾರೆ.
ಶಿವಾಜಿ ನಗರ, ಕೆ.ಜಿ.ಹಳ್ಳಿ, ಪುಲಕೇಶಿ ನಗರ, ಚಾಮರಾಜಪೇಟೆ ಸೇರಿದಂತೆ ನಗರದ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸುವಂತೆ ತಾಕೀತು ಮಾಡಿದ್ದಾರೆ. ಅಕ್ರಮ ಗೋ ಸಾಗಣೆ ತಡೆಯಲು ಅಗತ್ಯ ಕಡೆಗಳಲ್ಲಿ ನಾಕಾಬಂದಿ ಹಾಕಿ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ ಕೂಡಲೇ ವಶಕ್ಕೆ ಪಡೆದುಕೊಳ್ಳಿ. ಒಟ್ಟಾರೆ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಅನುವು ಮಾಡಿಕೊಡಿ ಎಂದು ಡಿಸಿಪಿಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.
ಹಲವು ತಿಂಗಳಿಂದ ನ್ಯಾಯಾಲದಿಂದ ಬಂದ ಅರೆಸ್ಟ್ ವಾರೆಂಟ್, ಜಾಮೀನು ರಹಿತ ವಾರೆಂಟ್ ಹಾಗೂ ದಂಡದ ನೋಟಿಸ್ಗಳನ್ನು ಸಂಬಂಧಪಟ್ಟವರಿಗೆ ಕೂಡಲೇ ತಲುಪಿಸಿ ಎಂದು ಕಮೀಷನರ್ ಭಾಸ್ಕರ್ ರಾವ್ ತಿಳಿಸಿದ್ದಾರೆ.