ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ನಿರಂತರವಾಗಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರವನ್ನು ಏರಿಕೆ ಮಾಡುವುದರ ಮೂಲಕ ಜನ ಸಾಮಾನ್ಯರ ಜೀವನದ ಮೇಲೆ ಕೊಡಲಿಯೇಟು ನೀಡುತ್ತಿದೆ. ಕೊರೊನಾ ಪಿಡುಗಿನಿಂದ ಇಡೀ ದೇಶವೇ ತತ್ತರಿಸುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಇಂಧನ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ - bangalore latest news
ಕೇಂದ್ರ ಸರ್ಕಾರ ದಿನೇ ದಿನೇ ಇಂಧನ ಬೆಲೆ ಏರಿಕೆ ಮಾಡುತ್ತಲೇ ಇದೆ. ಜತೆಗೆ ಅಗತ್ಯ ಅಸ್ತುಗಳ ಬೆಲೆಯೂ ಏರುತ್ತಿದೆ. ಕೂಡಲೇ ಬೆಲೆ ಏರಿಕೆಯನ್ನು ಕಡಿತಗೊಳಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಎಲ್ಪಿಜಿ ದರವನ್ನು ಪ್ರತಿ ತಿಂಗಳು 25 ರೂ. ರಂತೆ ಏರಿಕೆ ಮಾಡುವುದರ ಮೂಲಕ 1 ವರ್ಷದಲ್ಲಿ ಹತ್ತು ಬಾರಿ ಎಲ್ಪಿಜಿ ದರವನ್ನು ಏರಿಕೆ ಮಾಡಿದ್ದಾರೆ. ಬೆಲೆ ಏರಿಕೆಯಲ್ಲಿ ದಾಖಲೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಂತ್ಯಗೊಳ್ಳದೇ ಹೋದರೆ ದೇಶದ ಜನರ ಜೀವವೂ ಅಪಾಯಕ್ಕೆ ತಲುಪುತ್ತದೆ ಎಂದು ಪ್ರತಿಭಟನಾಕಾರರು ಅಸಮಾಧಾನ ಹೊರಹಾಕಿದ್ದಾರೆ. ಹಾಗಾಗಿ ಕೂಡಲೇ ಬೆಲೆ ಏರಿಕೆಯನ್ನು ಕಡಿತಗೊಳಿಸಬೇಕೆಂದು ಆಗ್ರಹಿಸಿ, ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.