ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಇಂದು ಪಕ್ಷದ ಹಿರಿಯ ನಾಯಕರ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ರಾಜ್ಯ ಸರ್ಕಾರದಿಂದ ಕೋವಿಡ್-19 ಪರಿಸ್ಥಿತಿ ನಿರ್ವಹಣೆ ಹಾಗೂ ವೈಫಲ್ಯಗಳ ಬಗ್ಗೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಆಗಿರುವ ಅನಾನುಕೂಲಗಳ ಬಗ್ಗೆ ಚರ್ಚಿಸಲಾಗಿದೆ.
ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದ ಕೈ ನಾಯಕರು: ಹಲವು ವಿಷಯಗಳ ಬಗ್ಗೆ ಚರ್ಚೆ
ದಿನೇ ದಿನೆ ಎಗ್ಗಿಲ್ಲದೇ ಏರುತ್ತಿರುವ ಪಟ್ರೋಲ್ ಮತ್ತು ಡೀಸೆಲ್ ಬೆಲೆ ಹಾಗೂ ಅದರಿಂದ ಜನಸಾಮಾನ್ಯರಿಗೆ ಆಗಿರುವ ತೊಂದರೆಗಳ ಬಗ್ಗೆ, ಪಂಚಾಯತ್ ಚುನಾವಣೆಯ ಬಗ್ಗೆ ಚರ್ಚಿಸಲಾಯಿತು.
ಅಷ್ಟೇ ಅಲ್ಲದೆ ದಿನೇ ದಿನೆ ಎಗ್ಗಿಲ್ಲದೇ ಏರುತ್ತಿರುವ ಪಟ್ರೋಲ್ ಮತ್ತು ಡೀಸೆಲ್ ಬೆಲೆ ಹಾಗೂ ಅದರಿಂದ ಜನಸಾಮಾನ್ಯರಿಗೆ ಆಗಿರುವ ತೊಂದರೆಗಳ ಬಗ್ಗೆ, ಪಂಚಾಯತ್ ಚುನಾವಣೆಯ ಬಗ್ಗೆ ಚರ್ಚಿಸಲಾಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ್ ಖಂಡ್ರೆ, ಹಿರಿಯ ನಾಯಕರಾದ ವೀರಪ್ಪ ಮೊಯ್ಲಿ, ರೆಹಮಾನ್ ಖಾನ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದರು.