ಬೆಂಗಳೂರು: ಕಂದಾಯ ವ್ಯಾಜ್ಯ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿದ್ದ ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಏಳು ಗಂಟೆಗಳ ಕಾಲ ಎಸಿಬಿ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಪ್ರಕರಣದ ತನಿಖಾಧಿಕಾರಿ ಕೇಳಿದ ಪ್ರಶ್ನೆಗಳಿಗೆ ಹೇಳಿಕೆ ದಾಖಲಿಸಿ ಕಳುಹಿಸಿದ್ದಾರೆ. ಅಗತ್ಯಬಿದ್ದರೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ವಿಚಾರಣೆ ಮುಗಿಸಿಕೊಂಡು ಹೊರಬಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಸಿ, ಪ್ರಕರಣ ನ್ಯಾಯಾಲಯದಲ್ಲಿದೆ, ಏನೂ ಮಾತನಾಡುವುದಿಲ್ಲ. ಎಸಿಬಿಯವರು ತನಿಖೆ ಮಾಡೋದು ಮಾಡಿದ್ದಾರೆ. ವಿಚಾರಣೆಗೆ ಕರೆದಿದ್ದರು ಬಂದಿದ್ದೆ. ಅಗತ್ಯವಾದರೆ ಮತ್ತೆ ಹಾಜರಾಗುವೆ ಎಂದರು.
ಬೇಗೂರಿನ ನಿವಾಸಿಯೊಬ್ಬರು ಅನೇಕಲ್ನ ಕೂಡ್ಲು ಗ್ರಾಮದಲ್ಲಿ 38 ಗುಂಟೆ ಜಮೀನು ಹೊಂದಿದ್ದರು. ಡಿಸಿ ಕೋರ್ಟ್‌ನಲ್ಲಿ ವ್ಯಾಜ್ಯ ನಡೆಯುತ್ತಿತ್ತು. ಅರ್ಜಿದಾರರ ಅರ್ಜಿ ಕ್ಲಿಯರ್ ಮಾಡಿಕೊಡಬೇಕಾದರೆ ಆರೋಪಿ ಮಹೇಶ್ ಆರಂಭದಲ್ಲಿ 15 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟು ನಂತರ 5 ಲಕ್ಷ ರೂ.ಗೆ ಒಪ್ಪಿಕೊಂಡಿದ್ದ. ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದರು. ಜಮೀನು ವಿಚಾರವಾಗಿ ದೂರುದಾರರು ಎರಡು ಬಾರಿ ಜಿಲ್ಲಾಧಿಕಾರಿ ಭೇಟಿ ಮಾಡಿದ್ದರು ಎನ್ನಲಾಗಿದೆ. ಈ ಪ್ರಕರಣ ಈಗ ಜಿಲ್ಲಾಧಿಕಾರಿಯನ್ನು ಆರೋಪಿ ಸ್ಥಾನದಲ್ಲಿ ಇರಿಸಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಹೈಕೋರ್ಟ್ ಆದೇಶದ ಸ್ಪಷ್ಟ ಉಲ್ಲಂಘನೆ: ಎಲ್ಲೆಡೆ ರಾರಾಜಿಸುತ್ತಿರುವ ಬ್ಯಾನರ್, ಫ್ಲೆಕ್ಸ್