ಕರ್ನಾಟಕ

karnataka

ETV Bharat / state

ಬೆಂಗಳೂರು ನಗರ ಡಿಸಿ ಕಚೇರಿಯಲ್ಲಿದೆ ನೌಕರಿ: 105 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ - ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ

ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಸಂಪೂರ್ಣ ಮಾಹಿತಿ ಇಲ್ಲಿದೆ.

ನೇಮಕಾತಿ
ನೇಮಕಾತಿ

By

Published : Mar 6, 2023, 1:08 PM IST

ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ಸ್​ ಮತ್ತು ಕ್ಲೀನರ್ಸ್​ ಹುದ್ದೆಗಳು ಖಾಲಿ ಇವೆ. ಒಟ್ಟು 105 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ, ವಿದ್ಯಾರ್ಹತೆ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆ ಅಧಿಸೂಚನೆ

ಹುದ್ದೆಗಳು: ಜಿಲ್ಲಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ ಖಾಲಿ ಇರುವ 83 ಲೋಡರ್ಸ್​ ಮತ್ತು 22 ಕ್ಲೀನರ್​ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಕೆಲಸದ ನೇಮಕಾತಿ ಸ್ಥಳ ಬೆಂಗಳೂರು.

ವಿದ್ಯಾರ್ಹತೆ: ಯಾವುದೇ ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಸ್ಪಷ್ಟವಾಗಿ ಕನ್ನಡ ಮಾತನಾಡಲು ಬರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗೆ ಅನುಭವ:ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋರ್ಡರ್ಸ್​​ ಮತ್ತು ಕ್ಲೀನರ್ಸ್​ ಹುದ್ದೆಯಲ್ಲಿ ಹಾಲಿ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಅಥವಾ ಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಹೊರ ಗುತ್ತಿಗೆ ಆಧಾರಿತ ಮೇಲೆ ಕನಿಷ್ಠ 2 ವರ್ಷವಾದರೂ ನಿರಂತರವಾಗಿ ಕೆಲಸ ನಿರ್ವಹಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ 55 ವರ್ಷ ವಯೋಮಿತಿ ಮೀರಿರಬಾರದು. ವಿವಿಧ ವರ್ಗಗಳಿಗೆ ಜಿಲ್ಲಾಧಿಕಾರಿ ಕಚೇರಿ ಬೆಂಗಳೂರು ನಿಯಮ ಅನುಸಾರ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ:ಮೇಲ್ಕಂಡ ಹುದ್ದೆಗಳಿಗೆ 17,000 ದಿಂದ 28,950ರವರೆಗೆ ಮಾಸಿಕ ವೇತನವಿದೆ.

ಅರ್ಜಿ ಸಲ್ಲಿಕೆ ಹೇಗೆ:ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಘಟಕ, ಜಿಲ್ಲಾಧಿಕಾರಿ ಕಾರ್ಯಾಲಯ, 4ನೇ ಮಹಡಿ, ಬೆಂಗಳೂರು ನಗರ ಜಿಲ್ಲೆ. ಈ ವಿಳಾಸದಲ್ಲಿ ಅಭ್ಯರ್ಥಿಗಳು ಅರ್ಜಿಯನ್ನು ಪಡೆಯಬಹುದು.

ಈ ಅರ್ಜಿ ಜೊತೆಗೆ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆ ಅಥವಾ ಗುರುತಿನ ಚೀಟಿ ದಾಖಲೆ ಸೇರಿದಂತೆ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಮೇಲ್ಕಂಡ ವಿಳಾಸಕ್ಕೆ ರಿಜಿಸ್ಟರ್​ ಅಥವಾ ಖುದ್ದಾಗಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕ: ಫೆ. 8ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಮಾರ್ಚ್​ 15 ಕಡೇಯ ದಿನ.

ಬೆಂಗಳೂರು ಜಿಲ್ಲಾಧಿಕಾರಿ ಕಾರ್ಯಾಲಯ​ ಹೊರಡಿಸಿದ ಅಧಿಕೃತ ಅಧಿಸೂಚನೆ ಮತ್ತು ಸಂಪೂರ್ಣ ವಿವರವನ್ನು ಪರಿಶೀಲಿಸಲು ಅಭ್ಯರ್ಥಿಗಳು bengaluruurban.nic.in ಜಾಲತಾಣಕ್ಕೆ ಭೇಟಿ ನೀಡಬಹುದು.

ಇದನ್ನೂ ಓದಿ: ಐಡಿಬಿಐ ನೇಮಕಾತಿ; 600 ಅಸಿಸ್ಟೆಂಟ್ ಮ್ಯಾನೇಜರ್​​​ ಹುದ್ದೆಗಳಿಗೆ ಅರ್ಜಿ ಆಹ್ವಾನ

ABOUT THE AUTHOR

...view details