ಬೆಂಗಳೂರು:ಕಟ್ಟಡ ಕಾರ್ಮಿಕರಿಬ್ಬರ ಮೇಲೆ ಸೈಜುಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಕಾರ್ಮಿಕರನ್ನು ಕಲ್ಯಾಣನಗರದ ಸಹದೇವ (27) ಹಾಗೂ ದಂಡಪಾನಿ (29) ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಈ ಕೊಲೆಗಳು ನಡೆದಿದ್ದು, ಕೊಳೆತ ಸ್ಥಿತಿಯಲ್ಲಿದ್ದ ಶವಗಳನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.