ಬಿದರಹಳ್ಳಿ/ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ 1500 ಬಡ ಕುಟುಂಬಗಳಿಗೆ ಉಚಿತವಾಗಿ ದಿನಸಿ ಸಾಮಾಗ್ರಿಗಳ ಕಿಟ್ಗಳನ್ನು ಬಿದರಹಳ್ಳಿ ಗ್ರಾಪಂ ಅಧ್ಯಕ್ಷ ವರಣ್ ಹಾಗೂ ಸದಸ್ಯ ಚಂದ್ರಶೇಖರ್ ವಿತರಿಸಿದರು.
ಯುಗಾದಿ ಹಬ್ಬದ ಪ್ರಯುಕ್ತ ಬಡವರಿಗೆ ದಿನಸಿ ಸಾಮಾಗ್ರಿ ಕಿಟ್ ವಿತರಿಸಿದ ಗ್ರಾಪಂ ಅಧ್ಯಕ್ಷ - GP President Varun
ಕೊರೊನಾ 2ನೇ ಅಲೆಯಿಂದ ಸಾರ್ವಜನಿಕರು ತೊಂದರೆಗೊಳಗಾಗುತ್ತಿದ್ದಾರೆ. ಈ ಸಂದರ್ಭದಲ್ಲಿ ಉಳ್ಳವರು ಇಲ್ಲದವರಿಗೆ ಸಹಾಯ ಮಾಡುವ ಮೂಲಕ ಸಹಕರಿಸುವಂತೆ ಬಿದರಹಳ್ಳಿ ಗ್ರಾಪಂ ಅಧ್ಯಕ್ಷ ವರಣ್ ಮನವಿ ಮಾಡಿದರು.
ಮಹದೇವಪುರ ಕ್ಷೇತ್ರದ ಬಿದರಹಳ್ಳಿ ಪಂಚಾಯಿತಿ ವ್ಯಾಪ್ತಿಯ ಭತ್ತೆಶ್ವರ ಬಡಾವಣೆ, ಗುಂಡಪ್ಪ ಲೇಔಟ್, ಅಯ್ಯಪ್ಪ ಸ್ವಾಮಿ ಲೇಔಟ್, ಪುಣ್ಯಭೂಮಿ ಲೇಔಟ್, ಚೌಡೇಶ್ವರಿ ಲೇಔಟ್, ಟೀಚರ್ಸ್ ಕಾಲೋನಿ, ವಿ.ಸಿ.ಕೆ ಲೇಔಟ್, ಅಂಬೇಡ್ಕರ್ ಕಾಲೋನಿಯಲ್ಲಿ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ ಮಾಡುವ ಮೂಲಕ ಬಡವರಿಗೆ ಕೊರೊನಾ ಸಂಕಷ್ಟದಲ್ಲಿ ನೆರವಾಗಿದ್ದಾರೆ.
ಈ ವೇಳೆ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ವರುಣ್, ಕೊರೊನಾದಂತಹ ತುರ್ತು ಪರಿಸ್ಥಿತಿಯಲ್ಲಿ ಬಡವರಿಗೆ ನೆರವಾಗುವ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದ್ದೇವೆ. ದೇಶದೆಲ್ಲೆಡೆ ಕೊರೊನಾ 2ನೇ ಅಲೆ ಹರಡುತ್ತಿರುವ ಹಿನ್ನೆಲೆ ಎಚ್ಚರಿಕೆಯಿಂದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಕೊರೊನಾ 2ನೇ ಅಲೆಯಿಂದ ಸಾರ್ವಜನಿಕರು ತೊಂದರೆಗೊಳಗಾಗುತ್ತಿದ್ದಾರೆ. ಈ ಸಂದರ್ಭದಲ್ಲಿ ಉಳ್ಳವರು ಇಲ್ಲದವರಿಗೆ ಸಹಾಯ ಮಾಡುವ ಮೂಲಕ ಸಹಕರಿಸುವಂತೆ ಮನವಿ ಮಾಡಿದರು.