ಕರ್ನಾಟಕ

karnataka

ನಾಲ್ಕು ದಿನಗಳ ಕೃಷಿ ಮೇಳಕ್ಕೆ ತೆರೆ: ಸಖತ್​ ಎಂಜಾಯ್​ ಮಾಡಿದ ಸಿಲಿಕಾನ್​ ಸಿಟಿ ಜನ

By

Published : Oct 28, 2019, 3:33 AM IST

ಯಲಹಂಕದ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕೃಷಿ ಮೇಳಕ್ಕೆ ತೆರೆ ಎಲೆಯಲಾಯಿತು. ಕಳೆದ ನಾಲ್ಕು ದಿನದಿಂದ ನಡೆಯುತ್ತಿದ್ದ ಕೃಷಿ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಸಮಾರೋಪ ಸಮಾರಂಭ ಕಾರ್ಯಕ್ರಮದ ಮೂಲಕ ಕೃಷಿ ಸುಗ್ಗಿ ಹಬ್ಬ ಮುಕ್ತಾಯಗೊಂಡಿದೆ.

ನಾಲ್ಕು ದಿನಗಳ ಕೃಷಿ ಮೇಳಕ್ಕೆ ತೆರೆ

ಬೆಂಗಳೂರು : ಯಲಹಂಕದ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕೃಷಿ ಮೇಳಕ್ಕೆ ತೆರೆ ಎಲೆಯಲಾಯಿತು. ಕಳೆದ ನಾಲ್ಕು ದಿನದಿಂದ ನಡೆಯುತ್ತಿದ್ದ ಕೃಷಿ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಸಮಾರೋಪ ಸಮಾರಂಭ ಕಾರ್ಯಕ್ರಮದ ಮೂಲಕ ಕೃಷಿ ಸುಗ್ಗಿ ಹಬ್ಬ ಮುಕ್ತಾಯಗೊಂಡಿದೆ.

ನಾಲ್ಕು ದಿನಗಳ ಕೃಷಿ ಮೇಳಕ್ಕೆ ತೆರೆ

ಪ್ರತಿ ವರ್ಷದಂತೆ ಈ ವರ್ಷ ಕೂಡ ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದಲ್ಲಿ ವಾರ್ತಾ ಇಲಾಖೆ, ಕೃಷಿ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಕೃಷಿ ವಿಶ್ವ ವಿದ್ಯಾಲಯದಲ್ಲಿ ಕೃಷಿ ಮೇಳ ಆಯೋಜನೆ ಮಾಡಲಾಗಿತ್ತು. ಇದು 51 ನೇ ಕೃಷಿ ಮೇಳವಾಗಿದ್ದು, ಮೊದಲನೇ ದಿನ ಸಿಎಂ ಯಡಿಯೂರಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಡಿಸಿಎಂ ಗೋವಿಂದ ಕಾರಜೋಳ, ಡಿಸಿಎಂ ಅಶ್ವತ್ಥ ನಾರಾಯಣ, ಸಚಿವ ಮಾಧುಸ್ವಾಮಿ ಸೇರಿದಂತೆ ಹಲವರು ಕೃಷಿ ಮೇಳ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಹಾಗೂ ಮಾದರಿ ರೈತರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಕೃಷಿ ಮೇಳದಲ್ಲಿ ಸಾವಿರಕ್ಕೂ ಅಧಿಕ ಸ್ಟಾಲ್‌ಗಳನ್ನು ಹಾಕಲಾಗಿದ್ದು, ರೈತರು ಬೆಳೆದ ವಿವಿಧ ಕೃಷಿ ಬೆಳೆಗಳು, ನಾನಾ ತಳಿಯ ಸಸಿಗಳನ್ನ ಮಾರಾಟ ಮತ್ತು ಪ್ರದರ್ಶನಕ್ಕೆ ಇಡಲಾಗಿತ್ತು. ರಾಜ್ಯದ ಬೇರೆ ಭಾಗಗಳಿಂದ ರೈತರು ಕೃಷಿ ಮೇಳದಲ್ಲಿ ಪಾಲ್ಗೊಂಡು, ತಾವು ಬೆಳೆದ ಹಲವು ಸಾಮಾಗ್ರಿಗಳನ್ನ ಪ್ರದರ್ಶನಕ್ಕಿಟ್ಟಿದ್ದರು.

ABOUT THE AUTHOR

...view details