ಬೆಂಗಳೂರು:ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಿತು. ಇದೇ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮಕ್ಕೂ ಒತ್ತಾಯಿಸಿದೆ.
ವಿಧಾನಸಭೆ ಅಧಿವೇಶನದ ನಂತರ ರಾತ್ರಿ ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಗೆ ಎಂ.ಪಿ ರೇಣುಕಾಚಾರ್ಯ, ಮಾಡಾಳು ವಿರೂಪಾಕ್ಷಪ್ಪ, ಹರತಾಳು ಹಾಲಪ್ಪ, ಎಂ.ಪಿ ಕುಮಾರಸ್ವಾಮಿ ಸೇರಿದಂತೆ 50ಕ್ಕೂ ಹೆಚ್ಚು ಶಾಸಕರು ಭೇಟಿ ನೀಡಿದರು. ಕ್ಷೇತ್ರಕ್ಕೆ ಅನುದಾನ ನೀಡಿಕೆ, ಅಭಿವೃದ್ಧಿ ಕಾರ್ಯಗಳು, ಶಾಸಕರ ಅನುದಾನ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ಯಾವುದೇ ಕ್ಷೇತ್ರಕ್ಕೂ ಅನುದಾನ ಕೊರತೆ ಮಾಡಲ್ಲ, ಹಣಕಾಸು ಸ್ಥಿತಿ ನೋಡಿಕೊಂಡು ಹಂತ ಹಂತವಾಗಿ ಎಲ್ಲರಿಗೂ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಅಭಿವೃದ್ಧಿ ಯೋಜನೆಗಳಿಗೂ ಹಣ ನೀಡಲಾಗುತ್ತದೆ ಎಂದು ಶಾಸಕರಿಗೆ ಸಿಎಂ ಅಭಯ ನೀಡಿದ್ದಾಗಿ ತಿಳಿದು ಬಂದಿದೆ.