ಬೆಂಗಳೂರು:ಸಿಟಿ ಸಿವಿಲ್ ನ್ಯಾಯಾಲಯದ ನ್ಯಾಯಧೀಶರು, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹಾಗೂ ಸಿಸಿಬಿ ಹೆಚ್ಚುವರಿ ಆಯುಕ್ತರಿಗೆ ಅನಾಮಧೇಯ ಬೆದರಿಕೆ ಪತ್ರ ಹಾಗೂ ಸ್ಫೋಟಕ ವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ.
ಅನಾಮಧೇಯ ಬೆದರಿಕೆ ಪತ್ರ ಹಾಗೂ ಸ್ಫೋಟಕ ವಸ್ತು ಪತ್ತೆ ಪ್ರಕರಣದ ಆರೋಪಿಗಳ ಸುಳಿವು ಸಿಕ್ಕಿದೆ. ಹೀಗಾಗಿ ಕಮಿಷನರ್ ಕಚೇರಿಯಲ್ಲಿ ಹೆಚ್ಚುವರಿ ಆಯುಕ್ತರು, ಸಿಸಿಬಿ ಆಯುಕ್ತರು, ಡಿಸಿಪಿಗಳೊಂದಿಗೆ ಆಯುಕ್ತರು ಸಭೆ ನಡೆಸಿದ್ದಾರೆ.
ಈ ಸಭೆಯಲ್ಲಿ ಸ್ಫೋಟಕ ವಸ್ತು ಹಾಗೂ ಅನಾಮಧೇಯ ಪತ್ರದ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಈಗಾಗಲೇ ಆರೋಪಿಗಳ ಸುಳಿವು ಸಿಕ್ಕ ಕಾರಣ ನ್ಯಾಯಾಲಯದ ಒಳಗಡೆ ಪತ್ರ ಬಂದಿದ್ದು ಹೇಗೆ?, ಸಿಟಿ ಸಿವಿಲ್ ನ್ಯಾಯಾಲಯದ ಬಳಿ ಕೊರೊನಾ ಇರುವ ಹಿನ್ನೆಲೆ ಯಾರನ್ನೂ ಕೂಡ ಒಳಗಡೆ ಬಿಡ್ತಿಲ್ಲ. ಆದರೂ ಪೊಲೀಸರ ಕಣ್ತಪ್ಪಿಸಿ ಹೇಗೆ ಹೋಗಲು ಸಾಧ್ಯವಾಯ್ತು?, ಆರ್. ಆರ್. ನಗರ ಚುನಾವಣೆ ವಿಚಾರ, ಹೀಗೆ ನಗರದಲ್ಲಿ ಪ್ರಮುಖ ಬೆಳವಣಿಗೆಗಳು ಇರುವ ಕಾರಣ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಅಲರ್ಟ್ ಆಗಿರುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತನಿಖಾಧಿಕಾರಿಗಳು ಆರೋಪಿಗಳ ಪೂರ್ವಾಪರ ವಿಚಾರಣೆ ನಡೆಸಿ ಮಾಹಿತಿ ಕಲೆಹಾಕಲು ತಿಳಿಸಿದ್ದಾರೆ. ಈಗಾಗಲೇ ಹೈಕೋರ್ಟ್ನ ಪ್ರಮುಖ ನ್ಯಾಯಮೂರ್ತಿ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುವಂತೆ ಸೂಚನೆ ಕೊಟ್ಟಿದ್ದಾರೆ.