ಬೆಂಗಳೂರು: ಡಿಜೆ ಹಳ್ಳಿ ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸುತ್ತಿದ್ದಂತೆ ಆತನ ತಂದೆಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಮಾನವೀಯತೆ ಹಿನ್ನೆಲೆಯಲ್ಲಿ ಆರೋಪಿಗೆ ತನ್ನ ತಂದೆಯ ಅಂತಿಮ ದರ್ಶನಕ್ಕಾಗಿ ಪೊಲೀಸರು ಅವಕಾಶ ಕಲ್ಪಿಸಿದ್ದಾರೆ.
ಠಾಣೆಗೆ ಕಲ್ಲು ತೂರಾಟ ನಡೆಸಿದರೂ ಮಾನವೀಯತೆ ಮೆರೆದ ಡಿಜೆ ಹಳ್ಳಿ ಪೊಲೀಸರು! - DJ halli case latest news
ಪೊಲೀಸ್ ಠಾಣೆಗೆ ಕಲ್ಲು ತೂರಾಟ ನಡೆಸಿದ್ದ ಆರೋಪದಡಿ ಫರ್ಹಾನ್ ಎಂಬಾತನನ್ನು ಬಂಧಿಸಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಆರೋಪಿ ತಂದೆ ಮೃತಪಟ್ಟಿದ್ದಾರೆ. ಆದರೆ ಆರೋಪಿಗೆ ತಂದೆಯ ಅಂತಿಮ ದರ್ಶನ ಪಡೆಯಲು ಅವಕಾಶ ನೀಡಿದ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.
DJ halli police station
ಪೊಲೀಸ್ ಠಾಣೆಗೆ ಕಲ್ಲು ತೂರಾಟ ನಡೆಸಿದ್ದ ಆರೋಪದಡಿ ಫರ್ಹಾನ್ ಎಂಬಾತನನ್ನು ಬಂಧಿಸಲಾಗಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಆರೋಪಿಯ ತಂದೆಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದ ಪೊಲೀಸರು ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಬಂಧಿತನನ್ನು ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಠಾಣೆಯಿಂದ ಡಿಜೆ ಹಳ್ಳಿಯ ಕುಬ್ಬ ಮಸೀದಿ ರಸ್ತೆಯಲ್ಲಿರುವ ಮನೆಗೆ ಹೋಗಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಬಳಿಕ ಆರೋಪಿಯನ್ನು ಪುನಃ ಠಾಣೆಗೆ ಕರೆತಂದಿದ್ದಾರೆ.