ಬೆಂಗಳೂರು: ರಾತ್ರಿ ದರೋಡೆಗೆ ಸಂಚು ರೂಪಿಸಿ ಸಾರ್ವಜನಿಕರಿಂದ ಲೂಟಿ ಮಾಡಲು ರೆಡಿಯಾಗಿದ್ದ ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾತ್ರಿ ವೇಳೆ ದರೋಡೆಗೆ ಸಂಚು: ಖದೀಮರ ಹೆಡೆಮುರಿ ಕಟ್ಟಿದ ಸಿಸಿಬಿ ಪೊಲೀಸರು - ಕಳ್ಳತನಕ್ಕೆ ಯೋಜನೆ
ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕತ್ತಲಲ್ಲಿ ನಿಂತುಕೊಂಡು ರಾತ್ರಿ ದಾರಿಯಲ್ಲಿ ಒಂಟಿಯಾಗಿ ಹೋಗುವ ಸಾರ್ವಜನಿಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಹಣ-ಚಿನ್ನಾಭರಣಗಳನ್ನು ದೋಚಲು ಸಜ್ಜಾಗಿದ್ದರು. ಈ ಮಾಹಿತಿ ಪಡೆದ ಸಿಸಿಬಿ ಡಿಸಿಪಿ ರವಿ ಕುಮಾರ್ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ನಾಗರಾಜ, ಪ್ರೇಮ್ ಕುಮಾರ್, ಶ್ರೇಯಸ್, ನಂದನ್, ಕೇವಿನ್ ಬಂಧಿತ ಆರೋಪಿಗಳು. ಈ ಆರೋಪಿಗಳು ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕತ್ತಲಲ್ಲಿ ನಿಂತುಕೊಂಡು ರಾತ್ರಿ ದಾರಿಯಲ್ಲಿ ಒಂಟಿಯಾಗಿ ಹೋಗುವ ಸಾರ್ವಜನಿಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಹಣ-ಚಿನ್ನಾಭರಣಗಳನ್ನು ದೋಚಲು ಸಜ್ಜಾಗಿದ್ದರು. ಈ ಮಾಹಿತಿ ಪಡೆದ ಸಿಸಿಬಿ ಡಿಸಿಪಿ ರವಿ ಕುಮಾರ್ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಆರೋಪಿಗಳ ಬಳಿ ಇದ್ದ ಮಚ್ಚು, ಲಾಂಗ್, ಖಾರದ ಪುಡಿ ವಶಪಡಿಸಿಕೊಂಡು ತನಿಖೆ ಮುಂದುವರೆಸಲಾಗಿದೆ. ಸದ್ಯ ಈ ಬಂಧಿತ ಆರೋಪಿಗಳ ಮೇಲೆ ನಗರದ ಹಲವಾರು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಕೊರೊನಾ ಮಹಾಮಾರಿ ಬಂದ ಬಳಿಕ ಹಣ ಇಲ್ಲದೆ ಮನೆಯಲ್ಲಿಯೇ ಇದ್ದು, ಮತ್ತೆ ಹಣ ಮಾಡುವ ಉದ್ದೇಶದಿಂದ ಈ ರೀತಿ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ.