ಬೆಂಗಳೂರು: ಕೊರೊನಾ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಅವಧಿಯಲ್ಲೇ ಸಿಬ್ಬಂದಿ ಹಾಗೂ ಸೆಕ್ಯೂರಿಟಿ ಗಾರ್ಡ್ ಕಣ್ತಪ್ಪಿಸಿ ಪರಾರಿಯಾಗಿದ್ದ ಆರೋಪಿಯನ್ನು ಡಿ.ಜಿ.ಹಳ್ಳಿ ಪೊಲೀಸರು ಮತ್ತೆ ಬಂಧಿಸಿದ್ದಾರೆ.
ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ ಕೊರೊನಾ ಸೋಂಕಿತ ಆರೋಪಿಯ ಬಂಧನ - ಬೆಂಗಳೂರಿನಲ್ಲಿ ಕೊರೊನಾ ಪ್ರಕರಣ
ಕೊರೊನಾ ಸೋಂಕು ತಗುಲಿ ಆಸ್ಪತ್ರೆ ಕ್ವಾರಂಟೈನ್ನಿಂದ ಎಸ್ಕೇಪ್ ಆಗಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಡಿ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಕಳೆದ ಎರಡು ದಿನಗಳ ಹಿಂದೆ ಡಿ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದರು. ಬಳಿಕ ಸ್ವ್ಯಾಬ್ ಟೆಸ್ಟ್ಗೆ ಒಳಪಡಿಸಿದಾಗ ಆರೋಪಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾದ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿನ್ನೆ ಕ್ವಾರಂಟೈನ್ ಮಾಡಲಾಗಿತ್ತು.
ಆದರೆ ಬಿಗಿ ಭದ್ರತೆ ನಡುವೆಯೂ ಸಿಬ್ಬಂದಿ ಕಣ್ತಪ್ಪಿಸಿ ಆಸ್ಪತ್ರೆಯ ಗೇಟ್ ಹಾರಿ ಈತ ಎಸ್ಕೇಪ್ ಆಗಿದ್ದ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆ ಹಿರಿಯ ವೈದ್ಯಾಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಡಿ.ಜಿ.ಹಳ್ಳಿ ಪೊಲೀಸರು ಎಸ್ಕೇಪ್ ಆದವನನ್ನು ಬಂಧಿಸಿದ್ದಾರೆ.