ಬೆಂಗಳೂರು :ಸಿಲಿಕಾನ್ ಸಿಟಿಯಲ್ಲಿ ಮತ್ತೆ ಕಳ್ಳರ ಹಾವಳಿ ಹೆಚ್ಚಾಗ್ತಿದೆ. ಆದರೆ, ಈ ಪ್ರರಣದಲ್ಲಿ ಮಾತ್ರ ಪೊಲೀಸರು ಕಳ್ಳರನ್ನ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಇಬ್ಬರು ಸರಗಳ್ಳರು ಅಂದರ್.. ಸಿಸಿಟಿವಿ ಆಧರಿಸಿ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು..
ದಕ್ಷಿಣ ವಿಭಾಗದ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಬೈಕ್ನಲ್ಲಿ ಬಂದು ಸರ ಕಳವು ಮಾಡುತ್ತಿದ್ದ ಇಬ್ಬರನ್ನು ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ನೇತೃತ್ವದ ತಂಡ ಬಂಧಿಸಿದೆ. ಆರೋಪಿಗಳನ್ನು ವಿನೋದ್ ರಾಜ ಮತ್ತು ಗಜೇಂದ್ರ ಎಂದು ಗುರುತಿಸಲಾಗಿದೆ
ದಕ್ಷಿಣ ವಿಭಾಗದ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಬೈಕ್ನಲ್ಲಿ ಬಂದು ಸರ ಕಳವು ಮಾಡುತ್ತಿದ್ದ ಇಬ್ಬರನ್ನು ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ನೇತೃತ್ವದ ತಂಡ ಬಂಧಿಸಿದೆ. ಬಂಧಿತರನ್ನ ವಿನೋದ್ ರಾಜ ಮತ್ತು ಗಜೇಂದ್ರ ಎಂದು ಗುರುತಿಸಲಾಗಿದೆ. ಇವರ ಕಳ್ಳತನದ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು ಕಳ್ಳರನ್ನು ಹೆಡೆಮುರಿ ಕಟ್ಟಿದ್ದಾರೆ.
ಆಫೀಷಿಯಲ್ ಏರಿಯಾಗಳಲ್ಲಿ ವಯಸ್ಸಾದ ಮಹಿಳೆಯರೇ ಆರೋಪಿಗಳ ಟಾರ್ಗೇಟ್ ಎಂಬ ಮಾಹಿತಿ ಹೊರ ಬಿದ್ದಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಬೈಕ್, 400 ಗ್ರಾಂ ಚಿನ್ನಾಭರಣ ವಶ ಪಡಿಸಿಕೊಂಡಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.