ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿವೆ. ನಗರದ ಪ್ರತಿಷ್ಠಿತ ಕಾಲೇಜಿನ ಡೀನ್‌ಗೂ ಕೊರೊನಾ ಸೋಂಕು ತಗುಲಿದೆ.
ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಕಾಲೇಜಿನ ಡೀನ್‌ಗೂ ಕೊರೊನಾ..
ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಹೌಸ್ ಕೀಪಿಂಗ್ ಮಹಿಳೆಗೂ ಕೊರೊನಾ ಪಾಸಿಟಿವ್ ಇರುವುದು ಖಚಿವಾಗಿದೆ.
ಬನಶಂಕರಿಯ ಖಾಸಗಿ ಕಾಲೇಜಿನ ಡೀನ್ ಸ್ವಲ್ಪ ದಿನದ ಹಿಂದೆ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದಾಗ, ಪಾಸಿಟಿವ್ ಇರುವುದು ತಿಳಿದು ಬಂದಿದೆ. ಸದ್ಯ ಇವರ ಸಂಪರ್ಕಿತರನ್ನ ಕ್ವಾರಂಟೈನ್ ಮಾಡಲಾಗಿದ್ದು, ಕಾಲೇಜಿನಲ್ಲಿ ಆತಂಕ ಶುರುವಾಗಿದೆ.
ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಹೌಸ್ ಕೀಪಿಂಗ್ ಮಹಿಳೆಗೂ ಕೊರೊನಾ ಪಾಸಿಟಿವ್ ಇರುವುದು ಖಚಿವಾಗಿದೆ. ಜ್ವರದಿಂದಾಗಿ ಬಳಲುತ್ತಿದ್ದ ಇವರು ಕೊರೊನಾ ಟೆಸ್ಟ್ ಮಾಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಚಿಕಿತ್ಸೆಗಾಗಿ ಮಹಿಳೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮಹಿಳೆಯ ಸಂಪರ್ಕದಲ್ಲಿದ್ದವರ ಪತ್ತೆ ಕಾರ್ಯದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ.