ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ನಕಲಿ ಸಾಫ್ಟ್‌ವೇರ್ ಸೃಷ್ಟಿಸಿ ನಕಲಿ ಟಿಕೆಟ್ ಮಾಡುವ ಪ್ರಕರಣವನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ರೈಲ್ವೆ ನಕಲಿ ಟಿಕೆಟ್ ಪ್ರಕರಣ: ಸಿಬಿಐ ತನಿಖೆಗೆ ವಹಿಸಲು ಸರ್ಕಾರ ನಿರ್ಧಾರ - ಬೆಂಗಳೂರು ರೈಲ್ವೇ ನಕಲಿ ಟಿಕೆಟ್ ಪ್ರಕರಣ
ಬೆಂಗಳೂರಿನ ರೈಲ್ವೆ ನಕಲಿ ಟಿಕೆಟ್ ಪ್ರಕರಣ ಸಂಬಂಧ ಈಗಾಗಲೇ ಎಫ್ಐಆರ್ ದಾಖಲಾಗಿ ತನಿಖೆ ಆಗುತ್ತಿತ್ತು. ಎಲ್ಲಾ ರಾಜ್ಯದಲ್ಲಿ ಇಂತಹ ಪ್ರಕರಣಗಳು ಆಗಿವೆ ಎಂದು ಬೊಮ್ಮಾಯಿ ತಿಳಿಸಿದರು.
ಬೆಂಗಳೂರು ರೈಲ್ವೇ ನಕಲಿ ಟಿಕೆಟ್ ಪ್ರಕರಣ: ಸಿಬಿಐ ತನಿಖೆಗೆ ವಹಿಸಲು ಸರ್ಕಾರ ನಿರ್ಧಾರ
ವಿಧಾನಸೌಧದಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಬೆಂಗಳೂರಿನ ಪ್ರಕರಣ ಸಂಬಂಧ ಈಗಾಗಲೇ ಎಫ್ಐಆರ್ ದಾಖಲಾಗಿ ತನಿಖೆ ಆಗುತ್ತಿತ್ತು. ಎಲ್ಲಾ ರಾಜ್ಯದಲ್ಲಿ ಇಂತಹ ಪ್ರಕರಣಗಳು ಆಗಿವೆ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ಕೊಡಿ ಅಂತ ರೈಲ್ವೆ ಬೋರ್ಡ್ ಅಧಿಕಾರಿಗಳು ಮನವಿ ಮಾಡಿದ್ದರು ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಬೆಂಗಳೂರು ಪ್ರಕರಣವನ್ನು ಸಿಬಿಐಗೆ ತನಿಖೆಗೆ ಕೊಡಲು ನಿರ್ಧರಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.