ಬೆಂಗಳೂರು:ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಓರ್ವ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾದ ಘಟನೆ ಪೀಣ್ಯ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಭೀಕರ ರಸ್ತೆ ಅಪಘಾತ: ಓರ್ವ ಬಲಿ, ಮೂವರಿಗೆ ಗಂಭೀರ ಗಾಯ - accident today
ಬೆಂಗಳೂರಿನ ಪೀಣ್ಯದ 8ನೇ ಮೈಲಿ ಜಂಕ್ಷನ್ನಲ್ಲಿ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದರ ಪಕ್ಕದಲ್ಲಿ ಬಸ್ಗಾಗಿ ಕಾಯುತ್ತಿದ್ದ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ.
ಭೀಕರ ರಸ್ತೆ ಅಪಘಾತ
ನಗರದ ಪೀಣ್ಯ 8ನೇ ಮೈಲಿ ಜಂಕ್ಷನ್ನಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತ ರಭಸಕ್ಕೆ ಬಸ್ ನಿಲ್ದಾಣದ ಕಂಬಕ್ಕೆ ಸಿಲುಕಿಕೊಂಡಿದೆ. ಅಲ್ಲೇ ನಿಂತಿದ್ದ ಪ್ರಯಾಣಿಕ ಮೃತಪಟ್ಟಿದ್ದಾನೆ.
ಕಂಬಕ್ಕೆ ಹಾಯ್ದು ಬಸ್ ಅನ್ನು ಅಗ್ನಿಶಾಮಕ ಸಿಬ್ಬಂದಿ ಬಂದು ಕಾರ್ಯಾಚರಣೆ ನಡೆಸಿ, ಬಸ್ನಲ್ಲಿದ್ದ ಪ್ರಯಾಣಿಕರ ಜೀವ ಉಳಿಸುವ ಕೆಲಸ ಮಾಡಿದರು. ಘಟನೆ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಪೀಣ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.