ಬೆಂಗಳೂರು: ಸ್ಮಾರ್ಟ್ ಸಿಟಿ ನಗರಗಳಲ್ಲಿ ಸೈಕಲ್ ಚಾಲನೆಗಾಗಿಯೇ ವಿಶೇಷ ಪಥಗಳನ್ನು ನಿರ್ಮಿಸಿದ್ದು, ಈ ಕುರಿತಾದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ನಮ್ಮ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯು ಪುರಸ್ಕಾರಕ್ಕೆ ಪಾತ್ರವಾಗಿದೆ.
ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಇಲಾಖೆ ರಾಷ್ಟ್ರ ಮಟ್ಟದಲ್ಲಿ ಆಯೋಜಿಸಿದ್ದ ಈ ಸೈಕಲ್ ಫಾರ್ ಚೇಂಜ್ ಸ್ಪರ್ಧೆಯಲ್ಲಿ 107 ಸ್ಮಾರ್ಟ್ ಸಿಟಿ ನಗರಗಳು ಪಾಲ್ಗೊಂಡಿದ್ದು, ಸೈಕಲ್ ಸ್ನೇಹಿ ಪಥಗಳ ನಿರ್ಮಾಣದಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ರಾಷ್ಟ್ರ ಮಟ್ಟದ ಪುರಸ್ಕಾರಕ್ಕೆ ಭಾಜನವಾಗಿದೆ ಎಂದು ಬೆಂಗಳೂರು ಸ್ಮಾರ್ಟ್ ಸಿಟಿ ಮುಖ್ಯಸ್ಥ ಮತ್ತು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ತಿಳಿಸಿದ್ದಾರೆ.