ಕರ್ನಾಟಕ

karnataka

ETV Bharat / state

ವಿದ್ಯಾರ್ಥಿ ವೇತನ ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ - bangalore suicide case

ವಿದ್ಯಾರ್ಥಿಗಳು ಮಾನಸಿಕ ಆರೋಗ್ಯದ ಕಡೆ ಹೆಚ್ಚು ಗಮನ ನೀಡಬೇಕು. ಇದಕ್ಕಾಗಿ ಪ್ರತ್ಯೇಕ ಸಹಾಯವಾಣಿ ತೆರೆದಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಶಿಕ್ಷಣ ಸಂಸ್ಥೆ ಮನವಿ ಮಾಡಿದೆ..

bangalore student committed to suicide !
ವಿದ್ಯಾರ್ಥಿ ವೇತನ ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ!

By

Published : Apr 30, 2021, 1:34 PM IST

ಬೆಂಗಳೂರು: ವಿದ್ಯಾರ್ಥಿ ವೇತನ ಸಿಗಲಿಲ್ಲ ಎಂದು ಮನನೊಂದು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ರೋಹನ್‌ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಬಿಎಸ್ಸಿ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ರೋಹನ್ ಭವಿಷ್ಯದಲ್ಲಿ ಮಾಸ್ಟರ್ ಆಫ್ ಸೈನ್ಸ್ ಮಾಡಿ ವಿದೇಶಕ್ಕೆ ಹಾರುವ ಕನಸು ಕಂಡಿದ್ದ.

ಇದಕ್ಕಾಗಿ ವಿದೇಶಿ ವಿಶ್ವವಿದ್ಯಾಲಯದಲ್ಲಿ ಸ್ಕಾಲರ್‌ಶಿಪ್​​ಗಾಗಿ ಅರ್ಜಿ ಸಲ್ಲಿಸಿದ್ದ. ಆದರೆ, ಈವರೆಗೂ ಸ್ಕಾಲರ್ ಶಿಪ್ ಸಿಗದ ಪರಿಣಾಮ ಮನನೊಂದಿದ್ದ. ಹೀಗಾಗಿ, ಉಳಿದುಕೊಂಡಿದ್ದ ಹಾಸ್ಟೆಲ್ ಕೊಠಡಿಯಲ್ಲಿಯೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ.

ಈತ ನಗರದ ವಸಂತಪುರ ನಿವಾಸಿಯಾಗಿದ್ದು, ಮೃತನ ತಂದೆ ಬ್ಯುಸಿನೆಸ್ ಮ್ಯಾನ್ ಆಗಿದ್ದಾರೆ. ಸದ್ಯ ಮಾಹಿತಿ ಆಧರಿಸಿ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ‌.

ಇದನ್ನೂ ಓದಿ:ದುಪ್ಪಟ್ಟು ಬೆಲೆಗೆ ಮಾರಾಟ ಆರೋಪ: ಮಂಡ್ಯದಲ್ಲಿ 70ಕ್ಕೂ ಹೆಚ್ಚು ಆಕ್ಸಿಜನ್ ಸಿಲಿಂಡರ್​ ವಶ

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಆತ್ಮಕ್ಕೆ ಶಾಂತಿ ಸಿಗುವಂತೆ ಹಾಗೂ ಕುಟುಂಬ ವರ್ಗದವರಿಗೆ ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸುವುದಾಗಿ ಐಐಎಸ್ಸಿ ತಿಳಿಸಿದೆ. ವಿದ್ಯಾರ್ಥಿಗಳು ಮಾನಸಿಕ ಆರೋಗ್ಯದ ಕಡೆ ಹೆಚ್ಚು ಗಮನ ನೀಡಬೇಕು. ಇದಕ್ಕಾಗಿ ಪ್ರತ್ಯೇಕ ಸಹಾಯವಾಣಿ ತೆರೆದಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಶಿಕ್ಷಣ ಸಂಸ್ಥೆ ಮನವಿ ಮಾಡಿದೆ.

ABOUT THE AUTHOR

...view details