ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳೆಂಬ ಕಾರಣಕ್ಕೆ ಅನುತ್ತೀರ್ಣ ಮಾಡಿರುವ ಆರೋಪ ಕೇಳಿಬಂದಿದ್ದು, 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕ್ಯಾಂಪಸ್ನಲ್ಲಿ ಪ್ರತಿಭಟನೆ ನಡೆಸಿದರು.
ದಲಿತ ವಿದ್ಯಾರ್ಥಿಗಳನ್ನು ಫೇಲ್ ಮಾಡಿದ ಆರೋಪ: ಬೆಂಗಳೂರು ವಿವಿ ಕ್ಯಾಂಪಸ್ನಲ್ಲಿ ಪ್ರತಿಭಟನೆ - ತರಗತಿಯನ್ನು ಬಹಿಷ್ಕರಿಸಿ ಪ್ರತಿಭಟನೆ
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳೆಂಬ ಕಾರಣಕ್ಕೆ ಅನುತ್ತೀರ್ಣ ಮಾಡಿರುವ ಆರೋಪ ಕೇಳಿಬಂದಿದ್ದು, 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕ್ಯಾಂಪಸ್ನಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ
ಬೆಂಗಳೂರು ವಿವಿಯ ಐಚ್ಚಿಕ ಇಂಗ್ಲೀಷ್ ವಿಭಾಗದ ದಲಿತ ಹಾಗೂ ಹಿಂದುಳಿದ ವಿದ್ಯಾರ್ಥಿಗಳನ್ನು ಫೇಲ್ ಮಾಡಿದ್ದಾರೆಂಬ ಗಂಭೀರ ಆರೋಪ ಮಾಡಿರುವ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.
ದಲಿತ ವಿದ್ಯಾರ್ಥಿಗಳನ್ನ ವಿನಾ ಕಾರಣ ಟಾರ್ಗೆಟ್ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು. ಜಾತಿ ವಿರೋಧಿ ಪ್ರಾಧ್ಯಾಪಕರು ಎಂದು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.