ಬೆಂಗಳೂರು:ಬೆಂಗಳೂರು ಜಲ ಮಂಡಳಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 2 ಕೋಟಿ ಹಣ ದೇಣಿಗೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಗುರುವಾರ ಹಸ್ತಾಂತರಿಸಲಾಯಿತು.
ಆರ್‌ಟಿ ನಗರದ ಸಿಎಂ ಅಧಿಕೃತ ನಿವಾಸಕ್ಕೆ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜೇಶ್ ಸಿಂಗ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ಎನ್. ಜಯರಾಂ ಮತ್ತು ಇತರ ಹಿರಿಯ ಅಧಿಕಾರಿಗಳು ಆಗಮಿಸಿದ್ದರು.