ಬೆಂಗಳೂರು:ಎರಡನೇ ದಿನಕ್ಕೆ ಬ್ಯಾಂಕ್ ನೌಕರರ ಮುಷ್ಕರ ಕಾಲಿಟ್ಟಿದ್ದು, ಮೈಸೂರು ಬ್ಯಾಂಕ್ ವೃತ್ತದ ಎಸ್ಬಿಐ ಆವರಣದಲ್ಲಿ ಸಿಬ್ಬಂದಿ ಪ್ರತಿಭಟನೆ ಮುಂದುವರೆಸಿದ್ದಾರೆ.
2ನೇ ದಿನಕ್ಕೆ ಕಾಲಿಟ್ಟ ಬ್ಯಾಂಕ್ ನೌಕರರ ಮುಷ್ಕರ: ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ - Bengaluru latest news
ಬ್ಯಾಂಕ್ ನೌಕರರ ಮುಷ್ಕರ 2ನೇ ದಿನಕ್ಕೆ ಕಾಲಿಟ್ಟಿದ್ದು, ಕೇಂದ್ರ ಸರ್ಕಾರ ತಕ್ಷಣ ತನ್ನ ಹೇಳಿಕೆ ಹಿಂಪಡೆಯಬೇಕು ಎಂದು ಒತ್ತಾಯ ಮಾಡಲಾಗುತ್ತಿದೆ.
ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ
ರಾಷ್ಟ್ರೀಕೃತ ಬ್ಯಾಂಕ್ಗಳ ಖಾಸಗೀಕರಣ ವಿರೋಧಿಸಿ ನಿರಶನ ಕೈಗೊಂಡಿದ್ದು, ಖಾಸಗೀಕರಣದಿಂದ ಠೇವಣಿದಾರರು, ರೈತರು, ಬಡಜನರಿಗೆ ತೊಂದರೆಯಾಗುತ್ತಿದೆ ಎಂದು ದೂರಿದ್ದಾರೆ.
ಕೇಂದ್ರ ಸರ್ಕಾರ ತಕ್ಷಣ ತನ್ನ ಹೇಳಿಕೆ ಹಿಂಪಡೆಯಬೇಕು ಎಂದು ಒತ್ತಾಯ ಮಾಡಲಾಗುತ್ತಿದ್ದು, ಬ್ಯಾಂಕ್ ಸಂಘಟನೆಗಳ ಐಕ್ಯ ವೇದಿಕೆಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.