ಬೆಂಗಳೂರು:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರು ಮತ್ತೆ ಮಾ. 11ರಿಂದ ಮೂರು ದಿನ ಮುಷ್ಕರ ಮಾಡುವ ನಿರ್ಧಾರವನ್ನು ಕೈ ಬಿಟ್ಟಿದ್ದಾರೆ ಎನ್ನಲಾಗುತ್ತಿದೆ.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರು ಕಳೆದ ಜ. 31 ಮತ್ತು ಫೆ. 1ರಂದು ಮುಷ್ಕರಕ್ಕೆ ಕರೆ ಕೊಟ್ಟಿದ್ದರು. ಬೇಡಿಕೆ ಈಡೇರದಿದ್ದರೆ ಮಾರ್ಚ್ 11, 12, 13ರಂದು ಕೂಡ ಮುಷ್ಕರ ಮಾಡುವುದಾಗಿ ತಿಳಿಸಿದ್ದರು. ಈ ಸಂಬಂಧ ಮುಂಬೈನ ಐಬಿಎ ಕಚೇರಿಯಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ನೌಕರರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ ಎನ್ನಲಾಗುತ್ತಿದೆ.