ಕರ್ನಾಟಕ

karnataka

ETV Bharat / state

ಯತ್ನಾಳ್ ಅಸ್ತ್ರ ಪ್ರಯೋಗಕ್ಕೆ ಸಿದ್ಧತೆ; ಸದನದಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗ್ತಾರಾ ಬಿಜೆಪಿ ರೆಬಲ್ ಶಾಸಕ

ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸುವ ಕುರಿತು ಸದನದಲ್ಲಿ ಧರಣಿ ನಡೆಸುವ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಶಾಸಕ ಬಸನಗೌಡ ಪಟೀಲ್ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

basangowda patil yathnal planning to held protest
ಬಸನಗೌಡ ಪಟೀಲ್

By

Published : Mar 9, 2021, 1:57 PM IST

ಬೆಂಗಳೂರು: 8ನೇ ಬಜೆಟ್ ಮಂಡಿಸಿ ಖುಷಿಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಶಾಕ್ ನೀಡಲು ಸ್ವಪಕ್ಷೀಯ ಶಾಸಕ ಬಸನಗೌಡ ಪಾಟೀಲ್ ಮುಂದಾಗಿದ್ದಾರೆ.

ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸುವ ಕುರಿತು ಸದನದಲ್ಲಿ ಧರಣಿ ನಡೆಸುವ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸುವಂತೆ ಒತ್ತಾಯಿಸಿ ಸದನದ ಹೊರಗೆ ನಡೆಯುತ್ತಿರುವ ಹೋರಾಟವನ್ನು ಸದನದ ಒಳಗೂ ನಡೆಸುವ ಪ್ರಯತ್ನಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚಿಂತನೆ ನಡೆಸಿದ್ದಾರೆ. ಸಮುದಾಯದ ಮೀಸಲಾತಿ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ಕೋರಲು ನಿರ್ಧರಿಸಿರುವ ಯತ್ನಾಳ್ , ಸಿಎಂ ಉತ್ತರ ನೀಡದೇ ಇದ್ದಲ್ಲಿ ಅಥವಾ ಚರ್ಚೆಗೆ ಅವಕಾಶ ಸಿಗದೇ ಇದ್ದಲ್ಲಿ ವಿಧಾನಸಭೆಯಲ್ಲಿಯೇ ಅಹೋರಾತ್ರಿ ಧರಣಿ ನಡೆಸಬೇಕು ಎನ್ನುವ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಫ್ರೀಡಂ ಪಾರ್ಕ್​ನಲ್ಲಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯಂಜಯ ಶ್ರೀಗಳ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ, ಉಪವಾಸ ಸತ್ಯಾಗ್ರಹದ ಬದಲು ಧರಣಿಯನ್ನೇ ಮುಂದುವರೆಸಿ ಶ್ರೀಗಳು ಸರ್ಕಾರಕ್ಕೆ ಸ್ವಲ್ಪ ಕಾಲಾವಕಾಶ ಕೊಟ್ಟಿದ್ದರು. ಆದರೆ, ಬಜೆಟ್​ನಲ್ಲಿ ಈ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲದ ಕಾರಣ ಸದನದಲ್ಲೇ ಇದಕ್ಕೆ ಉತ್ತರ ಪಡೆದುಕೊಳ್ಳಲು ಯತ್ನಾಳ್ ಅಸ್ತ್ರ ಪ್ರಯೋಗಕ್ಕೆ ಪಂಚಮಸಾಲಿ ಸಮುದಾಯದ ನಾಯಕರು ಮುಂದಾಗಿದ್ದಾರೆ.

ಸಮುದಾಯದ ಮುಖಂಡರ ಜತೆ ಸಮಾಲೋಚನೆ ನಡೆಸಿರುವ ಯತ್ನಾಳ್ ಧರಣಿಗೆ ಮುಂದಾಗಲಿದ್ದಾರೆ ಎನ್ನಲಾಗಿದೆ.‌ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ಸಿಗದೇ ಇದ್ದಲ್ಲಿ ಅಧಿವೇಶನದಲ್ಲಿ ಅಹೋರಾತ್ರಿ ಧರಣಿಗೆ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ABOUT THE AUTHOR

...view details