ಬೆಂಗಳೂರು: ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಮಹಾಪೀಠದ ಜಗದ್ಗುರು ಜಯಮೃತ್ಯುಂಜಯ ಸ್ವಾಮೀಜಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದರು.
ಬೆಂಗಳೂರು ನಿವಾಸದಲ್ಲಿ ಭೇಟಿಯಾಗಿ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯ ಪ್ರವರ್ಗ 2ಎಗೆ ಸೇರಿಸಲು ಸರ್ಕಾರದ ಮೇಲೆ ಒತ್ತಡ ಹೇರಿ ಎಂದು ಮನವಿ ಮಾಡಿದರು.