ಕರ್ನಾಟಕ

karnataka

ETV Bharat / state

ಬಸವಲಿಂಗ ಶ್ರೀ ಆತ್ಮಹತ್ಯೆ ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಿಲ್ಲ: ಐಜಿಪಿ - ಈಟಿವಿ ಭಾರತ ಕನ್ನಡ

ಕಂಚುಗಲ್​ ಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣವನ್ನು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ಕೆಲವರ ವಿಚಾರಣೆ ನಡೆಸಿದ್ದು, ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ತಿಳಿಸಿದರು.

basavalinga-swamiji-suicide-case-no-one-arrested-in-the-case
ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ : ಇದುವರೆಗೂ ಯಾರನ್ನು ಬಂಧಿಸಿಲ್ಲ: ಕೇಂದ್ರ ವಲಯದ ಐಜಿಪಿ ಮಾಹಿತಿ

By

Published : Oct 27, 2022, 3:15 PM IST

ಬೆಂಗಳೂರು: ಮಾಗಡಿಯ ಕಂಚುಗಲ್ ಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ರಾಮನಗರ ಪೊಲೀಸರು ಸ್ವಾಮೀಜಿಯೊಂದಿಗೆ ಫೋನ್‌ನಲ್ಲಿ ಮಾತನಾಡಿದ ಯುವತಿಗಾಗಿ‌ ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ. ಆತ್ಮಹತ್ಯೆಯ ಹಿಂದೆ ಹನಿಟ್ರ್ಯಾಪ್ ಶಂಕೆ ವ್ಯಕ್ತವಾಗಿದ್ದು ಈ ಆಯಾಮದಲ್ಲಿಯೂ ತನಿಖೆ ಪ್ರಗತಿಯಲ್ಲಿದೆ.

ಕೇಂದ್ರ ವಲಯದ ಐಜಿಪಿ ಚಂದ್ರಶೇಖರ್ ಪ್ರತಿಕ್ರಿಯಿಸಿ, ಪ್ರಕರಣ ಸಂಬಂಧ ಕೆಲವು ಶಂಕಿತ ವ್ಯಕ್ತಿಗಳ ವಿಚಾರಣೆ ನಡೆಸಲಾಗುತ್ತಿದೆ. ಮುಖ್ಯವಾಗಿ ತಾಂತ್ರಿಕ ಆಯಾಮದಲ್ಲಿ ತನಿಖೆ ನಡೆಯುತ್ತಿದೆ. ಆತ್ಮಹತ್ಯೆ ಮಾಡಿಕೊಂಡ ಜಾಗದಲ್ಲಿ ಡೆತ್ ನೋಟ್ ಸಿಕ್ಕಿದೆ. ಇದರೊಂದಿಗೆ ಕೆಲವು ಸಾಕ್ಷ್ಯಾಧಾರಗಳೂ ಲಭ್ಯವಾಗಿವೆ ಎಂದರು.

ಸಾವಿಗೂ ಮುನ್ನ ಶ್ರೀಗಳ ಜೊತೆ ಯಾರೆಲ್ಲ ಫೋನ್ ಕರೆಯಲ್ಲಿ ಮಾತನಾಡಿದ್ದರು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ. ಡೆತ್ ನೋಟ್ ತನಿಖೆಯ ಒಂದು ಭಾಗವಾಗಿದ್ದು ಸಾಂದರ್ಭಿಕ ಸಾಕ್ಷ್ಯಗಳಿಗಾಗಿ ಹುಡುಕಾಟ ನಡೆಯುತ್ತಿದೆ. ತನಿಖಾ ಹಂತದಲ್ಲಿ ಹೆಚ್ಚೇನೂ ಹೇಳಲು ಸಾಧ್ಯವಿಲ್ಲ.

ಸ್ವಾಮೀಜಿಯವರು ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರು ನೀಡಲಾಗಿದೆ. ಮೇಲ್ನೋಟಕ್ಕೆ ಸಾವಿಗೆ ಮಾನಸಿಕ ಒತ್ತಡವೇ ಕಾರಣ ಎಂದು ಹೇಳಲಾಗುತ್ತಿದೆ.‌ ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಐಜಿಪಿ ಚಂದ್ರಶೇಖರ್ ವಿವರಿಸಿದರು.

ಇದನ್ನೂ ಓದಿ:ರಾಮನಗರ: ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ತಿರುವು

ABOUT THE AUTHOR

...view details