ಕರ್ನಾಟಕ

karnataka

ETV Bharat / state

ವಿದೇಶಗಳಲ್ಲಿ ಕೋವಿಡ್ ಹೆಚ್ಚಳವನ್ನ ನಾವೂ ಗಂಭೀರವಾಗಿ ತೆಗೆದುಕೊಂಡಿದ್ದೇವೆ: ಬೊಮ್ಮಾಯಿ

ಕೊರೊನಾ ನಿಯಂತ್ರಣ ಮಾಡುವ ಬಗ್ಗೆ ಇಂದು ಸಭೆ ಕರೆಯಲಾಗಿದೆ. ಸಭೆಯಲ್ಲಿ ತಜ್ಱರು ಸಹ ಭಾಗವಹಿಸಲಿದ್ದಾರೆ. ವಿದೇಶಗಳಲ್ಲಿ ಕೋವಿಡ್ ಹೆಚ್ಚಳವಾಗಿರುವುದರಿಂದ ನಾವು ಈ ಸಮಸ್ಯೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

bommai
ಬಸವರಾಜ ಬೊಮ್ಮಾಯಿ

By

Published : Dec 22, 2022, 2:30 PM IST

ಬೆಂಗಳೂರು: ಕೋವಿಡ್ ಕಡಿಮೆಯಾಗಿದೆ ಎಂದು ನಿರಾಳಾರಾಗಿದ್ದೆವು. ಆದರೆ, ಈಗ ವಿದೇಶಗಳಲ್ಲಿ ಕೋವಿಡ್ ಹೆಚ್ಚಳವಾಗಿದೆ. ಹಾಗಾಗಿ, ಯಾವುದೇ ದೇಶದಲ್ಲೂ ಆದರೂ ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಬೂಸ್ಟರ್ ಡೋಸ್ ಬಗ್ಗೆ ಜನರಿಗೆ ಇನ್ನೂ ಆಸಕ್ತಿ ಬಂದಿಲ್ಲ. ಕೊರೊನಾ ನಿಯಂತ್ರಣ ಮಾಡುವ ಬಗ್ಗೆ ಇಂದು ಸಭೆ ಕರೆಯಲಾಗಿದೆ. ಸಭೆಯಲ್ಲಿ ತಜ್ಱರು ಸಹ ಭಾಗವಹಿಸಲಿದ್ದಾರೆ. ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ವೇಳೆ ಎಲ್ಲರೂ ಸಹಕರಿಸಿದರೆ ಸಾವು, ನೋವುಗಳನ್ನು ತಡೆಯಬಹುದು ಎಂದು ಹೇಳಿದರು

ಇದಕ್ಕೂ ಮುನ್ನ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾತನಾಡಿ, ಚೀನಾ, ಜಪಾನ್, ಅಮೆರಿಕ, ದಕ್ಷಿಣ ಕೊರಿಯಾದಲ್ಲಿ ಪ್ರಕರಣಗಳು ಹೆಚ್ಚಾಗಿವೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಮೂರು ಗಂಟೆಗೆ ಸಭೆ ನಡೆಯಲಿದೆ. ಯಾವ ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದನ್ನು ಚರ್ಚೆ ಮಾಡುತ್ತೇವೆ ಎಂದರು.

ರಾಜ್ಯದಲ್ಲಿ ಬೋಸ್ಟರ್ ಡೋಸ್ ಶೇ.20 ರಷ್ಟು ಮಾತ್ರ ತೆಗೆದುಕೊಂಡಿದ್ದಾರೆ. ಹಾಗಾಗಿ, ಡೋಸ್ ಅನ್ನು ತೆಗೆದುಕೊಳ್ಳಲು ಜಾಗೃತಿ ಮೂಡಿಸಲಾಗುವುದು ಎಂದು ಸದನದಲ್ಲಿ ತಿಳಿಸಿದರು.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸದನದಲ್ಲಿ ಮಾತನಾಡಿ, ವಿದೇಶದಲ್ಲಿ ಕೋವಿಡ್ ಹೆಚ್ಚಳವಾಗುತ್ತಿದೆ. ವಿಮಾನಗಳನ್ನು ರದ್ದು ಮಾಡುವ ಬಗ್ಗೆ ಕೇಂದ್ರದ ಜೊತೆ ಮಾತುಕತೆ ನಡೆಸಬೇಕು. ರಾಜ್ಯದಲ್ಲಿ ತಕ್ಷಣ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ:ವ್ಯಕ್ತಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆ: ಬೃಹತ್ ಪ್ರಮಾಣದಲ್ಲಿ ಪರೀಕ್ಷೆಗೆ ಮುಂದಾದ ಮಹಾನಗರ ಪಾಲಿಕೆ

ABOUT THE AUTHOR

...view details