ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಕೆಲವರು ನೀಡುತ್ತಿರುವ ವ್ಯತಿರಿಕ್ತ ಹೇಳಿಕೆಗಳಿಗೆ ಯಾವುದೇ ಅರ್ಥ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಉಳಿದ ಅವಧಿಗೂ ಬಿಎಸ್ವೈ ಮುಖ್ಯಮಂತ್ರಿ; ಬಸವರಾಜ ಬೊಮ್ಮಾಯಿ - reports about leadership change
ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಸೇರಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟೀಕರಣ ನೀಡಿದ್ದಾರೆ.
ಬಸವರಾಜ ಬೊಮ್ಮಾಯಿ
ಯಡಿಯೂರಪ್ಪ ಅವರು ನಮ್ಮ ಪ್ರಶ್ನಾತೀತ ನಾಯಕ. ಅವರ ನಾಯಕತ್ವದಲ್ಲಿಯೇ ನಾವು 2018ರ ಸಾರ್ವತ್ರಿಕ ಚುನಾವಣೆಯನ್ನು ಎದುರಿಸಿದ್ದೆವು, ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಜನರ ಮುಂದೆ ಹೋಗಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದೆವು, ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಯಡಿಯೂರಪ್ಪ ನಾಯಕತ್ವದಲ್ಲಿ ಸರ್ಕಾರವನ್ನು ಸಹ ರಚಿಸಲಾಗಿದೆ.
ಅವರು ಸರ್ಕಾರದ ಉಳಿದ ಅವಧಿಯನ್ನು ಪೂರ್ಣಗೊಳಿಸಲಿದ್ದು ಮುಂದಿನ ಚುನಾವಣೆಯನ್ನು ಕೂಡ ಅವರ ನೇತೃತ್ವದಲ್ಲಿ ಎದುರಿಸಲಾಗುತ್ತದೆ ಎಂದು ಪತ್ರಿಕಾ ಹೇಳಿಕೆ ಮೂಲಕ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.