ಕರ್ನಾಟಕ

karnataka

ETV Bharat / state

'ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು, ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಿ' - ಸಾರಿಗೆ ನೌಕರರ ಪ್ರತಿಭಟನೆ

ಸಾರ್ವಜನಿಕರಿಗೆ ತೊಂದರೆಯಾಗುವ ರೀತಿ ನಾವ್ಯಾರು ನಡೆದುಕೊಳ್ಳಬಾರದು. ಬಸ್ಸುಗಳ ಮೇಲೆ ಕಲ್ಲು ತೂರಾಟ ಸರಿಯಲ್ಲ. ಎಲ್ಲಿಯೂ ಕೂಡ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಬೇಡಿ, ಸಹಕಾರ ಕೊಡಿ ಎಂದು ಸಾರಿಗೆ ನೌಕರರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದರು.

Home minister basavaraj bommayi
ಗೃಹ ಸಚಿವ ಬಸವರಾಜ ಬೊಮ್ಮಾಯಿ

By

Published : Dec 11, 2020, 6:12 PM IST

ಬೆಂಗಳೂರು:ಸಾರಿಗೆ ನೌಕರರ ವಿಷಯದಲ್ಲಿ ನಮಗೆ ಸಹಾನುಭೂತಿ ಇದೆ. ಆದರೆ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಮಾಡಬಾರದು. ಶಾಂತಿಯುತವಾಗಿ ಮಾತುಕತೆ ಮೂಲಕ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು ಎಂದು ಪ್ರತಿಭಟನಾನಿರತ ಸಾರಿಗೆ ನೌಕರರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಓದಿ:ಬೇಡಿಕೆ ಆಲಿಸಲು ಸಿದ್ಧ, ಮುಷ್ಕರ ನಿಲ್ಲಿಸುವಂತೆ ಸಾರಿಗೆ ನೌಕರರಿಗೆ ಡಿಸಿಎಂ ಸವದಿ ಮನವಿ

ಡಿಸಿಎಂ ಲಕ್ಷ್ಮಣ ಸವದಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸಂದರ್ಭದ ಕಷ್ಟದಲ್ಲಿ ನೌಕರರ ಕೈಹಿಡಿದಿದ್ದೇವೆ. ಅವರ ವೇತನ ಪಾವತಿಸಿದ್ದೇವೆ. ಮುಖ್ಯಮಂತ್ರಿಗಳು ವೇತನಕ್ಕಾಗಿ ಹಣವನ್ನು ಬಿಡುಗಡೆ ಮಾಡಿದ್ದು, ಡಿಸೆಂಬರ್ ತಿಂಗಳ ವೇತನವನ್ನೂ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈವರೆಗೂ ನೌಕರರು ಏನೇ ಸಮಸ್ಯೆಯಾದರೂ ಸರ್ಕಾರದ ಜೊತೆಗೆ ಬಂದು ಮಾತುಕತೆ ನಡೆಸಿ ಪರಿಹಾರ ಕಂಡುಕೊಂಡಿದ್ದಾರೆ. ಈಗಲೂ ಅಂತಹ ನಡೆ ಅಗತ್ಯ ಎಂದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ

ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿ ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶವಿಲ್ಲ. ನಾವು ಆದಷ್ಟು ಬೇಗ ಈ ಸಮಸ್ಯೆ ಬಗೆಹರಿಸಲು ಎಲ್ಲಾ ರೀತಿಯ ಸಹಕಾರ ಕೊಡಲು ಸಿದ್ಧರಿದ್ದೇವೆ. ಈಗಾಗಲೇ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜೊತೆ ಮಾತುಕತೆ ನಡೆಸಿದ್ದೇನೆ. ಶಾಂತಿಯುತವಾಗಿ ಸಮಸ್ಯೆ ಪರಿಹರಿಸಿ ಎಂದು ಸೂಚಿಸಿದ್ದೇನೆ. ಸಾರಿಗೆ ನಿಗಮ ಹಾಗೂ ನೌಕರರ ಹಿತದೃಷ್ಟಿಯಿಂದ ಕೆಲಸಕ್ಕೆ ಹಾಜರಾಗಿ ನಿಮ್ಮ ಬೇಡಿಕೆಯನ್ನು ಮಂಡಿಸಿ ಸರ್ಕಾರ ಜೊತೆ ಚರ್ಚಿಸಿ ಎಂದು ಮನವಿ ಮಾಡಿದರು.

ABOUT THE AUTHOR

...view details