ಬೆಂಗಳೂರು: ಪಾದರಾಯನಪುರದಲ್ಲಿ ನಡೆದಿರುವ ಹಲ್ಲೆ ಆರೋಪದ ಘಟನಾ ಸ್ಥಳಕ್ಕೆ ಗೃಹ ಸಚಿವ ಬಸವಾರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬಾನೋತ್ ಅವರನ್ನು ತರಾಟೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಗೃಹ ಸಚಿವ ಬಸವಾರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ಇಂದು ಗೃಹ ಸಚಿವರು ಘಟನಾ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸುತ್ತಿದ್ದರು. ಅವರೊಂದಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ತೆರಳಿದ್ದರು. ಈ ವೇಳೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ನಿಮ್ಮಂಥ ಹಿರಿಯ ಅಧಿಕಾರಿಗಳಿದ್ದರೇ ಈ ಘಟನೆ ನಡೆಯುತ್ತಿರಲ್ಲಿಲ್ಲ. ಘಟನಾ ಸ್ಥಳಕ್ಕೆ ಯಾಕೆ ಭೇಟಿ ನೀಡಲಿಲ್ಲ. ಪಾದರಾಯನಪುರ ಸೀಲ್ಡೌನ್ ಆಗಿದ್ದು, ಇಲ್ಲಿ ಯಾಕೆ ಭದ್ರತೆ ಕೈಗೊಂಡಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬಳಿಕ ಮಾತನಾಡಿದ ಸಚಿವರು, ಪಾದರಾಯನಪುರದಲ್ಲಿ ನಡೆದಿರುವ ಹಲ್ಲೆ ಆರೋಪ ಪ್ರಕರಣ ಸಂಬಂಧ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಹಲವರನ್ನು ಬಂಧಿಸಿದ್ದು, ಕೆಲವರು ತಪ್ಪಿಸಿಕೊಂಡಿದ್ದಾರೆ. ಅವರನ್ನು ಪತ್ತೆ ಹಚ್ಚಿ ಬಂಧಿಸುತ್ತೇವೆ. ಈ ಕೃತ್ಯದ ಹಿಂದೆ ಯಾರೇ ದೊಡ್ಡ ವ್ಯಕ್ತಿಗಳಿದ್ದರೂ ಅವರ ವಿರುದ್ಧ ಕಠಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಸೀಲ್ಡೌನ್, ಲಾಕ್ಡೌನ್ ಏನು?, ಪೊಲೀಸರ ಕ್ರಮ ಏನು ಅನ್ನೋದನ್ನು ತೋರಿಸುತ್ತೇವೆ. ಇದು ಜಮೀರ್ ಅಹಮ್ಮದ್ ಸರ್ಕಾರವಲ್ಲ. ಇಲ್ಲಿ ಕೆಲವರಿಗೆ ಸರ್ಕಾರದ ಕಾರ್ಯಕ್ರಮಗಳನ್ನು ವಿರೋಧಿಸುವ ಪ್ರವೃತ್ತಿ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ನಗರ ಸಂಪೂರ್ಣವಾಗಿ ಖಾಕಿ ಕಣ್ಗಾವಲಿನಲ್ಲಿ ಇರಲಿದೆ ಎಂದು ಹೇಳಿದರು.
ಪಾದರಾಯನಪುರದಲ್ಲಿಒಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದು, 19 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.