ಬೆಂಗಳೂರು: ಈಗಾಗಲೇ ಕರುನಾಡ ಯುವರತ್ನ, ಕರ್ನಾಟಕ ರತ್ನ, ದಿವಂಗತ ಪುನೀತ್ ರಾಜ್ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ರಾಜ್ಯ ಸೇರಿದಂತೆ ದೇಶಾದ್ಯಂತೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಜೇಮ್ಸ್ ಸಿನಿಮಾ ಪ್ರದರ್ಶನಗಳನ್ನು ಕಡಿತಗೊಳಿಸಿ ದಿ ಕಾಶ್ಮೀರ್ ಫೈಲ್ಸ್ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಲಾಗ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಕಾಂಗ್ರೆಸ್ ನಾಯಕರು ಬಿಜೆಪಿಯ ಶಾಸಕರ ವಿರುದ್ಧ ಗಂಭೀರ ಆರೋಪ ಸಹ ಮಾಡಿದ್ದಾರೆ.
ಈ ಕುರಿತಂತೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದಾರೆ. ಜೇಮ್ಸ್ ಚಿತ್ರ ಪ್ರದರ್ಶನಕ್ಕೆ ಯಾವುದೇ ಅಡ್ಡಿಪಡಿಸಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸಂಜೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಯವರೊಂದಿಗೆ ಚರ್ಚಿಸಿದ್ದೇನೆ. ತೊಂದರೆಯಾದಲ್ಲಿ ಕೂಡಲೇ ಸರಿಪಡಿಸಿ, ಅನಾವಶ್ಯಕವಾಗಿ ಜೇಮ್ಸ್ ಸಿನಿಮಾವನ್ನು ಯಾರೂ ಚಿತ್ರಮಂದಿರಗಳಿಂದ ತೆಗೆಯತಕ್ಕದ್ದಲ್ಲ ಎಂದು ಹೇಳಿದರು.