ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕಾಗಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಈ ಮಧ್ಯೆ, ಸಭಾಪತಿ ಸ್ಥಾನವನ್ನು ಜೆಡಿಎಸ್ಗೆ ಬಿಟ್ಟುಕೊಡುವಂತೆ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಇಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಸಿಎಂ ಭೇಟಿ ಮಾಡಿದ್ದೆ, ದೇವೇಗೌಡರು ಸೇರಿದಂತೆ ಎಲ್ಲರೂ ಚರ್ಚಿಸಿ ಈ ಬಾರಿ ಸಭಾಪತಿ ಕೇಳೋಣ ಅಂತಾ ಮಾತುಕತೆ ಆಗಿತ್ತು. ಅದೇ ವಿಚಾರವಾಗಿ ಯಡಿಯೂರಪ್ಪರನ್ನ ಭೇಟಿ ಮಾಡುವಂತೆ ದೇವೇಗೌಡರು ಹೇಳಿದ್ದರು. ಎಂಎಲ್ಸಿಗಳ ಸಭೆ ಕರೆದಿದ್ದೇನೆ, ಅವರ ಜೊತೆ ಚರ್ಚಿಸಿ ತಿಳಿಸುತ್ತೇನೆ ಎಂದು ಸಿಎಂ ಹೇಳಿದ್ದಾರೆ. ದೇವೇಗೌಡರು ಪ್ರಧಾನಿ ಮೋದಿ, ಜೆಪಿ ನಡ್ಡಾರ ಜೊತೆ ಫೋನ್ ಮೂಲಕ ಮಾತುಕತೆ ಆಗಿದೆ ಎಂದಿದ್ದಾರೆ ಅಂತಾ ಹೊರಟ್ಟಿ ತಿಳಿಸಿದ್ದಾರೆ.