ಬೆಂಗಳೂರು: ಬಸವೇಶ್ವರ ನಗರ ಪೊಲೀಸರು ಕಾರ್ಯಾಚರಣೆ ನೆಡಸಿ ರಾತ್ರಿ ವೇಳೆ ದ್ವಿಚಕ್ರ ವಾಹನ ಕಳವು ಮಾಡುವುದನ್ನೇ ಕಸಬು ಮಾಡಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಬಸವೇಶ್ವರ ನಗರ ಪೊಲೀಸರ ಕಾರ್ಯಾಚರಣೆ: ರಾತ್ರಿ ವೇಳೆ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಖದೀಮನ ಬಂಧನ - ಕಳ್ಳನ ಬಂಧನ
ನಗರದಲ್ಲಿ ದ್ವಿಚಕ್ರ ವಾಹನ ಕಳವು ಮಾಡುವುದನ್ನೇ ಕಸಬು ಮಾಡಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳ್ಳನ ಬಂಧನ
ಕುರುಬರಹಳ್ಳಿಯಲ್ಲಿ ಮೆಡಿಕಲ್ ಶಾಪ್ ಮುಂದೆ ನಿಲ್ಲಿಸಿದ್ದ ಟಿ.ವಿ.ಎಸ್ ವಿಕ್ಟರ್ ದ್ವಿಚಕ್ರ ವಾಹನ ಕದ್ದೊಯ್ದಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಜಹೀರ್ ಅಹ್ಮದ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತನಿಂದ 90 ಸಾವಿರ ಬೆಲೆಯ 3 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದ್ದು, ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.