ಕರ್ನಾಟಕ

karnataka

ETV Bharat / state

ಕ್ಷುಲ್ಲಕ ಕಾರಣಕ್ಕೆ ಕಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು... ಕೃತ್ಯ ಸಿಸಿಟಿವಿಯಲ್ಲಿ ಸೆರೆ - ಬೆಂಗಳೂರು ಸುದ್ದಿ

ಕ್ಷುಲ್ಲಕ ಕಾರಣಕ್ಕೆ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಕ್ಷಣಾರ್ಧದಲ್ಲಿ ಕಾರು ಧಗಧಗನೆ ಹೊತ್ತಿ ಉರಿದಿದೆ. ಈ ಘಟನೆ ಜಯನಗರ 9ನೇ ಬ್ಲಾಕ್​ನಲ್ಲಿ ನಡೆದಿದೆ.

Bangalore
ಕಾರಿಗೆ ಬೆಂಕಿ

By

Published : Feb 18, 2020, 2:38 PM IST

ಬೆಂಗಳೂರು:ಮನೆ ಮುಂಭಾಗ ನಿಲ್ಲಿಸಿದ್ದ ಕಾರಿಗೆ ಬೆಂಕಿ ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆಮನೆ ಮುಂಭಾಗ ನಿಲ್ಲಿಸಿದ್ದ ಕಾರಿಗೆ ಬೆಂಕಿ ಇಟ್ಟ ಘಟನೆ ಬೆಳಕಿಗೆ ಬಂದಿದ್ದು ಸದ್ಯ ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ನಗರದ ಜಯನಗರ 9 ನೇ ಬ್ಲಾಕ್​ನಲ್ಲಿ ಸನಾವುಲ್ಲಾ ಖಾನ್ ವಾಸವಾಗಿದ್ದು ನಿನ್ನೆ ಎಂದಿನಂತೆ ಕೆಲಸ ಮುಗಿಸಿ ಮನೆಯ ಎದುರು ಕಾರು ನಿಲ್ಲಿಸಿದ್ದರು. ರಾತ್ರಿ ವೇಳೆ ಬಂದ ಕಿರಾತಕರು ಬಿಳಿ ಬಣ್ಣದ ಮಹೀಂದ್ರಾ ಎಕ್ಸ್ ಯುವಿ 500 ಕಾರಿಗೆ ಲೈಟರ್​ನಿಂದ ಬೆಂಕಿ ಹಚ್ಚಿದ್ದಾರೆ. ಪರಿಣಾಮ ಕ್ಷಣಾರ್ಧದಲ್ಲಿ ಕಾರು ಧಗಧಗನೆ ಹೊತ್ತಿ ಉರಿದಿದೆ.

ಇನ್ನು ಸನಾವುಲ್ಲಾ ಹೇಳುವ ಪ್ರಕಾರ ನೂರ್ ಪಾಷ ಅಂಡ್ ಗ್ಯಾಂಗ್ ಕ್ಷುಲಕ ಕಾರಣಕ್ಕೆ ಸನಾವುಲ್ಲಾ ಖಾನ್ ಮನೆ ಬಳಿ ಬಂದು ಗಲಾಟೆ ಮಾಡುತ್ತಿದ್ದರು. ಇದೇ ಕಾರಣಕ್ಕೆ ನೂರ್ ಪಾಷಾ ಜೊತೆ ನಿನ್ನೆ ಗಲಾಟೆಯಾಗಿತ್ತು. ಇದೇ ದ್ವೇಷಕ್ಕೆ ನೂರ್ ಪಾಷಾ ಹಾಗೂ ಸಾಜ್ಜಿದ್ ಸೇರಿದಂತೆ ನಾಲ್ವರು ದ್ವೇಷಕ್ಕೆ ಈ ಕುಕೃತ್ಯ ಮಾಡಿರುವ ಶಂಕೆ ಇದ್ದು ಕಿಡಿಗೇಡಿಗಳ ಕೃತ್ಯ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿದೆ‌.

ಇನ್ನು ಈ ಸಂಬಂಧ ತಿಲಕನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ದ ಎಫ್ಐಆರ್ ದಾಖಲು ಆಗಿದ್ದು ತನಿಖೆ ಮುಂದುವರೆಸಿದ್ದಾರೆ.

ABOUT THE AUTHOR

...view details