ಮಹದೇವಪುರ: ಅನುಮಾನಾಸ್ಪದ ರೀತಿಯಲ್ಲಿ ಬಿಬಿಎ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಮಹದೇವಪುರದಲ್ಲಿ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ಆಂಧ್ರ ಮೂಲಕ ವಿದ್ಯಾರ್ಥಿ ಮೋಕ್ಷಗ್ನ್ಯ ರೆಡ್ಡಿ (20) ಎಂದು ಗುರುತಿಸಲಾಗಿದೆ. ಈತ ಬಿಬಿಎ ವ್ಯಾಸಂಗ ಮಾಡುತ್ತಿದ್ದನು. ಇಂದು ವರ್ತೂರು ಸಮೀಪದಲ್ಲಿರುವ ಕೃಪಾನಿಧಿ ಕಾಲೇಜಿನ ವಸತಿ ನಿಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದ್ದು, ಮೂರು ದಿನಗಳ ಹಿಂದೆಯೇ ಯುವಕ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ಬಿಬಿಎ ವಿದ್ಯಾರ್ಥಿ ಶವ ಪತ್ತೆ ಕಳೆದ ನಾಲ್ಕು ದಿನಗಳಿಂದ ಯುವಕ ಆಂಧ್ರದಲ್ಲಿರುವ ಪೋಷಕರಿಗೆ ಫೋನ್ ಮಾಡಿರಲಿಲ್ಲ. ಇದರಿಂದ ಅನುಮಾನ ಬಂದು ಪೋಷಕರು ಬೆಂಗಳೂರಿನಲ್ಲಿರುವ ತಮ್ಮ ಸ್ನೇಹಿತರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಕಾಲೇಜಿಗೆ ತೆರಳಿ ವಿಚಾರಿಸಿ ಕೊಠಡಿ ತೆಗೆದು ನೋಡಿದಾಗ ವಿದ್ಯಾರ್ಥಿ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಓದಿ: ನೇಣು ಬಿಗಿದುಕೊಂಡು ಮಾನಸ ಗಂಗೋತ್ರಿ ವಿದ್ಯಾರ್ಥಿ ಆತ್ಮಹತ್ಯೆ
ಘಟನಾ ಸ್ಥಳಕ್ಕೆ ವರ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.