ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2021-22 ನೇ ಸಾಲಿಗೆ ಸಂಬಂಧಪಟ್ಟಂತೆ ಆರ್ಥಿಕ ವರ್ಷದ ಪೂರ್ಣ ಆಸ್ತಿ ತೆರಿಗೆಯನ್ನು ಏಪ್ರಿಲ್ 31 ರ ಒಳಗೆ ಪಾವತಿಸಿದ್ದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲು ಮುಂದಾಗಿದೆ.
ಇಂದು ಆಸ್ತಿ ತೆರಿಗೆ ಪಾವತಿಸಿದರೆ ಶೇ 5ರಷ್ಟು ರಿಯಾಯಿತಿ: ಬಿಬಿಎಂಪಿ ಆಫರ್ - bangalore latest news
ರಾಜ್ಯದಲ್ಲಿ 27 ರಿಂದ 14 ದಿನಗಳ ಕಾಲ ಕರ್ಫ್ಯೂ ಕೂಡ ಜಾರಿಯಲ್ಲಿದೆ. ಈ ಹಿನ್ನೆಲೆ ತೆರಿಗೆದಾರರ ಅನುಕೂಲಕ್ಕಾಗಿ 2021-22 ನೇ ಸಾಲಿಗೆ ಪೂರ್ಣವಾಗಿ ಆಸ್ತಿತೆರಿಗೆ ಪಾವತಿಸುವವರಿಗೆ ಶೇ.5 ರಷ್ಟು ರಿಯಾಯಿತಿ ನೀಡಿ ಪಾಲಿಕೆ ಆದೇಶ ಹೊರಡಿಸಿದೆ.
2021-22 ನೇ ಸಾಲಿನ ಆಸ್ತಿ ತೆರಿಗೆ ಸಂಗ್ರಹಣೆಯು ಏಪ್ರಿಲ್ ತಿಂಗಳಿನಿಂದ ಪ್ರಾರಂಭಗೊಂಡಿದೆ. ಈಗ ದೇಶದ್ಯಾಂತ ಹಾಗೂ ಬೆಂಗಳೂರು ಮಹಾನಗರದಲ್ಲಿ ಕೋವಿಡ್-19 ಸಮುದಾಯಕ್ಕೆ ವ್ಯಾಪಕವಾಗಿ ಹರಡಿದ್ದು, ಪರಿಸ್ಥಿತಿ ಗಂಭೀರವಾದ ಹಿನ್ನೆಲೆ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ 27 ರಿಂದ 14 ದಿನಗಳ ಕಾಲ ಕರ್ಫ್ಯೂ ಕೂಡ ಜಾರಿಯಲ್ಲಿದೆ. ಈ ಹಿನ್ನೆಲೆ ತೆರಿಗೆದಾರರು ಬ್ಯಾಂಕ್‌ಗಳಿಗೆ ಭೇಟಿ ನೀಡಿ ಆಸ್ತಿ ತೆರಿಗೆ ಪಾವತಿಸುವುದು ಕಷ್ಟ ಎನ್ನುವುದನ್ನು ಮನಗೊಂಡಿರುವ ಪಾಲಿಕೆ ತೆರಿಗೆದಾರರ ಅನುಕೂಲಕ್ಕಾಗಿ 2021-22 ನೇ ಸಾಲಿಗೆ ಪೂರ್ಣವಾಗಿ ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ.5 ರಷ್ಟು ರಿಯಾಯಿತಿ ನೀಡಿ ಆದೇಶ ಹೊರಡಿಸಿದೆ.
ಮೇ 31 ರ ಒಳಗಾಗಿ ಆಸ್ತಿ ತೆರಿಗೆ ಪಾವತಿಸುವ ಎಲ್ಲ ತೆರಿಗೆದಾರರಿಗೆ ಶೇ .5 ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.