ಬೆಂಗಳೂರು:ಬಿಬಿಎಂಪಿ ಕಂದಾಯ ವಿಭಾಗ ಆಸ್ತಿ ತೆರಿಗೆ ಸಂಗ್ರಹಿಸುವ ಹಾಗೂ ಖಾತಾ ನೀಡುವ ವಿಚಾರವಾಗಿ ಆಡಳಿತಗಾರರು ಹಾಗೂ ಆಯುಕ್ತರು ಇಂದು ಸಭೆ ನಡೆಸಿದರು. ಈ ವೇಳೆ ವಿಶೇಷ ಆಯುಕ್ತರಾದ (ಕಂದಾಯ) ಬಸವರಾಜು, ಜಂಟಿ ಆಯುಕ್ತರಾದ (ಕಂದಾಯ) ವೆಂಕಟಾಚಲಪತಿ, ವಲಯ ಉಪ ಆಯುಕ್ತರು, ಕಂದಾಯ ಅಧಿಕಾರಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಎಲ್ಲ ಕಂದಾಯ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ ಆಸ್ತಿ ತೆರಿಗೆಗೆ ಸೇರ್ಪಡೆಯಾಗದ ಎಲ್ಲ ಆಸ್ತಿಗಳನ್ನು ಕೂಡಲೆ ಆಸ್ತಿ ತೆರಿಗೆ ವ್ಯಾಪ್ತಿಗೆ ಸೇರ್ಪಡೆ ಮಾಡಬೇಕು. ವಲಯವಾರು ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ಸುಸ್ತಿದಾರರು (Defaulters)ಗಳ ಪಟ್ಟಿ ಸಿದ್ಧಪಡಿಸಿ ತ್ವರಿತವಾಗಿ ಬಾಕಿ ಮೊತ್ತವನ್ನು ಸಂಗ್ರಹಿಸಲು ಸೂಕ್ತ ಕ್ರಮವಹಿಸುವಂತೆ ಆಡಳಿತಗಾರರು ವಿಶೇಷ ಆಯುಕ್ತರಿಗೆ ಸೂಚನೆ ನೀಡಿದರು.
ಆದಾಯದ ಪ್ರಮಾಣ ಹೆಚ್ಚಿಸುವ ಸಂಬಂಧ ಬಿಬಿಎಂಪಿ ಅಧಿಕಾರಿಗಳ ಸಭೆ ಆಸ್ತಿ ತೆರಿಗೆ ಸಂಗ್ರಹಿಸಲು ಸಮಗ್ರ ಯೋಜನೆ ರೂಪಿಸಿಕೊಂಡು ನಗರ ವ್ಯಾಪ್ತಿಯಲ್ಲಿರುವ ಆಸ್ತಿಗಳ ಪರಿಶೀಲನೆ ಮಾಡಿ ಆಸ್ತಿ ತೆರಿಗೆ ಸಂಗ್ರಹಿಸಬೇಕು. ಅಧಿಕಾರಿಗಳು ಪಾಲಿಕೆಗೆ ಹೆಚ್ಚು ಆದಾಯ ಬರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಜಿಐಎಸ್ ಮ್ಯಾಪಿಂಗ್, ಡ್ರೋನ್ ಹಾಗೂ ಇನ್ನಿತರ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಕೆಲಸ ಮಾಡಿ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವರರ ಪಟ್ಟಿಯನ್ನು ಸಿದ್ಧಪಡಿಸಿ ನೋಟಿಸ್ ಜಾರಿ ಮಾಡಿ. ಆ ಬಳಿಕ ವಾರೆಂಟ್ ಜಾರಿ ಜೊತೆಗೆ ಆಸ್ತಿ ಮುಟ್ಟುಗೋಲು ಹಾಕಿ. ಎಲ್ಲ ಕಂದಾಯ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕು. ಆಸ್ತಿ ತೆರಿಗೆ ಸಂಗ್ರಹ ಮಾಡುವಲ್ಲಿ ವಿಳಂಬ ಮಾಡಬೇಡಿ. ಆದಾಯ ಕ್ರೂಢೀಕರಿಸುವ ನಿಟ್ಟಿನಲ್ಲಿ ಎಲ್ಲರೂ ಕಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆಗೆ ಬರುವ ಆದಾಯ ಮೂಲವನ್ನು ಹೆಚ್ಚಳ ಮಾಡುವಲ್ಲಿ ಕಾರ್ಯನಿರ್ವಹಿಸಬೇಕು. ಸರ್ಕಾರದಿಂದ ಬರುವ ಆದಾಯದ ಮೇಲೆ ಅವಲಂಬಿತವಾಗದೇ ಪಾಲಿಕೆ ವಿವಿಧ ಮೂಲಗಳಿಂದ ಬರುವ ಆದಾಯದ ಪ್ರಮಾಣವನ್ನು ಕ್ರಮೇಣವಾಗಿ ಹೆಚ್ಚಳ ಮಾಡಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಶ್ರಮವಹಿಸಿ ಕಾರ್ಯನಿರ್ವಹಿಸಬೇಕು. ನಿಗದಿತ ಸಮಯದಲ್ಲಿ ಹೆಚ್ಚು ತೆರಿಗೆ ಸಂಗ್ರಹ ಮಾಡಲು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆದಾಯದ ಪ್ರಮಾಣ ಹೆಚ್ಚಿಸುವ ಸಂಬಂಧ ಬಿಬಿಎಂಪಿ ಅಧಿಕಾರಿಗಳ ಸಭೆ ಆಯುಕ್ತರು ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ವಲಯವಾರು 100 ಡಿಫಾಲ್ಟರ್ಸ್ಗಳ ಪಟ್ಟಿ ಸಿದ್ಧಪಡಿಸಿ ಅಂತಹವರಿಗೆ ನೋಟಿಸ್ ಜಾರಿಗೊಳಿಸಿ, ತದನಂತರ ವಾರಂಟ್ ಜಾರಿ ಮಾಡಿ ಆಸ್ತಿಗಳ ಮುಟ್ಟುಗೋಲು ಹಾಕಿ. ಆ ಮೂಲಕ ಬಾಕಿ ಉಳಿಸಿಕೊಂಡಿರುವ ಮೊತ್ತವನ್ನು ತ್ವರಿತವಾಗಿ ಸಂಗ್ರಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ಕೋವಿಡ್ ಸೋಂಕು ಇದ್ದು, ಆ ಕಾರ್ಯ ಮಾಡುವ ಜೊತೆ ಜೊತೆಗೆ ಆಸ್ತಿ ತೆರಿಗೆ ಸಂಗ್ರಹಿಸುವ ವಿಚಾರದಲ್ಲೂ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಯಾರೊಬ್ಬರೂ ಸಬೂಬು ಹೇಳದೇ ಹೆಚ್ಚು ಆಸ್ತಿಗೆ ತೆರಿಗೆ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಹೊಸ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರುವ, ಖಾತಾ ನೀಡುವ ವಿಚಾರವಾಗಿ ಕೂಡಲೇ ಸೂಕ್ತ ಕ್ರಮವಹಿಸಬೇಕು. ಜಿ.ಐ.ಎಸ್ ಹಾಗೂ ಡ್ರೋನ್ ಮೂಲಕ ಸರ್ವೇ ಮಾಡಿ ಹಚ್ಚು ಆಸ್ತಿ ತೆರಿಗೆ ಸಂಗ್ರಹ ಮಾಡಲು ತಿಳಿಸಿದರು.
ಆದಾಯದ ಪ್ರಮಾಣ ಹೆಚ್ಚಿಸುವ ಸಂಬಂಧ ಬಿಬಿಎಂಪಿ ಅಧಿಕಾರಿಗಳ ಸಭೆ ತೆರಿಗೆ ವ್ಯಾಪ್ತಿಗೆ ಸೇರದ ಆಸ್ತಿಗಳನ್ನು ಹೆಚ್ಚಳ ಮಾಡಬೇಕು. ಈ ಬಗ್ಗೆ ಕಂದಾಯ ವಿಭಾಗದ ವಿಶೇಷ ಆಯುಕ್ತರು ಪ್ರತಿ ವಾರ ತಪ್ಪದೇ ಪರಿಶೀಲನೆ ಸಭೆ ನಡೆಸಬೇಕು. ಆಸ್ತಿ ಮಾಲೀಕರು 'Self Assessment Scheme' ಅಡಿ ಘೋಷಣೆ ಮಾಡಿಕೊಂಡಿರುವ ಬಗ್ಗೆ ಅಧಿಕಾರಿಗಳು ಪರಿಶೀಲನೆ ಮಾಡಬೇಕು. ಪ್ರತಿ ವಲಯದಲ್ಲೂ 'ಖಾತಾ ಮೇಳ' ಏರ್ಪಡಿಸಿ ಆಸ್ತಿ ಮಾಲೀಕರಿಗೆ ನಿಗದಿತ ಸಮಯದಲ್ಲಿ ಖಾತೆಗಳನ್ನು ನೀಡಿ. ಆ ಮೂಲಕ ಆಸ್ತಿ ತೆರಿಗೆ ವ್ಯಾಪ್ತಿಗೆ ಹೆಚ್ಚು ಆಸ್ತಿಗಳನ್ನು ಸೇರ್ಪಡೆ ಮಾಡಿ. ಎಲ್ಲವನ್ನೂ ಸರಿಯಾದ ರೀತಿ ಹಾಗೂ ನಿಖರವಾದ ಮಾಹಿತಿಯನ್ನು ದಾಖಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಶೇಷ ಆಯುಕ್ತರು ಬಸವರಾಜು ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 19.80 ಲಕ್ಷ ಆಸ್ತಿಗಳು ತೆರಿಗೆ ವ್ಯಾಪ್ತಿಯಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಇದುವರೆಗೆ 2,039 ಕೋಟಿ ರೂ. ಸಂಗ್ರಹ ಮಾಡಲಾಗಿದೆ. ಈಗಾಗಲೇ ವಲಯವಾರು ಹಾಗೂ ವಾರ್ಡ್ ವಾರು 100 ಡಿಫಾಲ್ಟರ್ಸ್ಗಳ ಪಟ್ಟಿಯನ್ನು ಸಿದ್ದಪಡಿಸಿದ್ದು, ಅವರಿಗೆಲ್ಲ ನೋಟಿಸ್, ವಾರಂಟ್ ಹಾಗೂ ಆಸ್ತಿ ಮುಟ್ಟುಗೋಲು ಹಾಕುವ ಮೂಲಕ ಆಸ್ತಿ ತೆರಿಗೆ ಸಂಗ್ರಹ ಮಾಡಲಾಗುವುದು. ಆಸ್ತಿ ತೆರಿಗೆ ವ್ಯಾಪ್ತಿಗೆ ಸೇರ್ಪಡೆಯಾಗದ ಆಸ್ತಿಗಳನ್ನು ಒಂದು ತಿಂಗಳಲ್ಲಿ ಸರ್ವೇ ನಡೆಸಿ ತೆರಿಗೆ ವ್ಯಾಪ್ತಿಗೆ ಸೇರ್ಪಡೆ ಮಾಡಲು ಕ್ರಮವಹಿಸಲಾಗುವುದು ಎಂದು ಆಡಳಿತಗಾರರು ಹಾಗೂ ಆಯುಕ್ತರು ಅವರಿಗೆ ತಿಳಿಸಿದರು.
ಆದಾಯದ ಪ್ರಮಾಣ ಹೆಚ್ಚಿಸುವ ಸಂಬಂಧ ಬಿಬಿಎಂಪಿ ಅಧಿಕಾರಿಗಳ ಸಭೆ