ಬೆಂಗಳೂರು:ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧೀಕ್ಷಕ ಇಂಜಿನಿಯರ್ ಆಗಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಧಿಕಾರಿಯನ್ನು ಮತ್ತೆ ಬಿಬಿಎಂಪಿಗೆ ನೇಮಿಸಲಾಗಿದೆ.
ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅಧಿಕಾರಿ ಬಿಬಿಎಂಪಿಗೆ ನೇಮಕ! - ಡಿಎ ಅಧೀಕ್ಷಕ ಇಂಜಿನಿಯರ್
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧೀಕ್ಷಕ ಇಂಜಿನಿಯರ್ ಆಗಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಧಿಕಾರಿಯನ್ನು ಮತ್ತೆ ಬಿಬಿಎಂಪಿಗೆ ನೇಮಿಸಲಾಗಿದೆ.
ಎನ್. ಜಿ. ಗೌಡಯ್ಯ, ಬಿಡಿಎ ಅಧೀಕ್ಷಕ ಇಂಜಿನಿಯರ್ ಆಗಿದ್ದಾಗ ಭ್ರಷ್ಟಾಚಾರದ ಆರೋಪ ಎದುರಿಸಿದ್ದರು. ಈ ಹಿಂದೆ ಎಸಿಬಿ ದಾಳಿ ನಡೆಸಿದ್ದಾಗ ಗೌಡಯ್ಯ ಮನೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿತ್ತು. ಈ ಆರೋಪ ಪ್ರಕರಣ ತನಿಖೆ ಪ್ರಗತಿಯಲ್ಲಿರುವಾಗಲೇ ಬಿಬಿಎಂಪಿ ಕೇಂದ್ರ ಯೋಜನೆ ವಿಭಾಗದ ಮುಖ್ಯ ಇಂಜಿನಿಯರ್ ಆಗಿ ನೇಮಿಸಿರುವುದು ವಿವಾದಕ್ಕೆ ಕಾರಣವಾಗಿದೆ.
ಎನ್. ಜಿ. ಗೌಡಯ್ಯರನ್ನು ಬಿಬಿಎಂಪಿ ಕೇಂದ್ರ ಯೋಜನೆ ವಿಭಾಗದ ಮುಖ್ಯ ಇಂಜಿನಿಯರ್ ಆಗಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ವೈ. ಆರ್. ಜಾನಕಿ ಆದೇಶ ಹೊರಡಿಸಿದ್ದಾರೆ. ಆದರೆ, ಗೌಡಯ್ಯ ಭ್ರಷ್ಟಾಚಾರ ಮಾಡಿ, ಅಕ್ರಮ ಹಣದ ಸಮೇತ ಎಸಿಬಿಗೆ ಸಿಕ್ಕಿಬಿದ್ದಿದ್ದಾರೆ. ಇವರ ನೇಮಕ ಹಿಂಪಡೆಯುವಂತೆ ಮುಖ್ಯಮಂತ್ರಿಗೆ ಪತ್ರ ಬರೆಯುವುದಾಗಿ ಬಿಬಿಎಂಪಿ ನಗರ ವಕ್ತಾರ ಎನ್. ಆರ್. ರಮೇಶ್ ತಿಳಿಸಿದ್ದಾರೆ.
TAGGED:
ಡಿಎ ಅಧೀಕ್ಷಕ ಇಂಜಿನಿಯರ್