ಬೆಂಗಳೂರು:ಗಾಂಧಿ ಜಯಂತಿಯ ಪ್ರಯುಕ್ತ ನಾಳೆ ಅಕ್ಟೋಬರ್ 2ರಂದು ನಗರದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಶುಸಂಗೋಪನಾ ವಿಭಾಗ ಆದೇಶ ಹೊರಡಿಸಿದೆ.
ಗಾಂಧಿ ಜಯಂತಿ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ
ಗಾಂಧಿ ಜಯಂತಿಯಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ ಹೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶಿಸಿದೆ.
ಗಾಂಧಿ ಜಯಂತಿ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ
ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲ ಕಸಾಯಿಖಾನೆಗಳಲ್ಲಿ ಪ್ರಾಣಿಗಳನ್ನು ಕಡಿಯುವುದನ್ನು ಮತ್ತು ಮಾಂಸ ಮಾರಾಟ ನಿಷೇಧ ಮಾಡಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ನಗರದ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ:ಹೈಕೋರ್ಟ್ ಆದೇಶದಂತೆ ಬಿಬಿಎಂಪಿ ಚುನಾವಣೆ ನಡೆಸಲು ನಾವು ಸಿದ್ಧ: ಮುಖ್ಯ ಆಯುಕ್ತ ತುಷಾರ್ ಗಿರಿನಾಥ್