ಕರ್ನಾಟಕ

karnataka

ETV Bharat / state

ಸರ್ಕಾರದಿಂದ ಗ್ರೀನ್ ಸಿಗ್ನಲ್; ಮಾರ್ಚ್ ಮೊದಲ ವಾರ ಬಿಬಿಎಂಪಿ ಬಜೆಟ್ ಮಂಡನೆ

ಮಾರ್ಚ್​ ಮೊದಲ ವಾರದಲ್ಲಿ ಬಿಬಿಎಂಪಿ ಬಜೆಟ್​ ಮಂಡನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

ಮಾರ್ಚ್ ಮೊದಲ ವಾರದಲ್ಲಿ ಬಿಬಿಎಂಪಿ ಬಜೆಟ್ ಮಂಡನೆ
ಮಾರ್ಚ್ ಮೊದಲ ವಾರದಲ್ಲಿ ಬಿಬಿಎಂಪಿ ಬಜೆಟ್ ಮಂಡನೆ

By ETV Bharat Karnataka Team

Published : Jan 5, 2024, 6:50 AM IST

ಬೆಂಗಳೂರು: ಪ್ರಸಕ್ತ ಸಾಲಿನ ಬಿಬಿಎಂಪಿ ಬಜೆಟ್​ಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಮಾರ್ಚ್ ಮೊದಲ ವಾರ ಆಯವ್ಯಯ ಮಂಡನೆಗೆ ಪಾಲಿಕೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಬಿಬಿಎಂಪಿ ಬಜೆಟ್ ಮಂಡನೆಗೆ ತಯಾರಿ ನಡೆಲಾಗುತ್ತಿದೆ.

ಏಪ್ರಿಲ್ ಇಲ್ಲವೇ ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾದರೆ ಚುನಾವಣಾ ಕಾರ್ಯಕ್ಕೆ ಪಾಲಿಕೆ ಸಿಬ್ಬಂದಿಯನ್ನು ನಿಯೋಜಿಸಬೇಕಿದೆ. ಹೀಗಾಗಿ, ಚುನಾವಣೆಗೂ ಮುನ್ನವೇ ಬಜೆಟ್ ಮಂಡನೆ ಮಾಡಲಾಗುತ್ತಿದೆ.

ಬಜೆಟ್​ ತಯಾರಿಗೆ ಪಾಲಿಕೆಯ ಹಣಕಾಸು ವಿಭಾಗದ ವಿಶೇಷ ಅಯುಕ್ತರ ನೇತೃತ್ವದಲ್ಲಿ ನಾಲ್ಕು ತಂಡಗಳ ರಚನೆ ಮಾಡಲಾಗಿದೆ. 2024-25 ನೇ ಸಾಲಿನಲ್ಲಿ ಕೈಗೊಳ್ಳುವ ಕಾಮಗಾರಿ ಯೋಜನೆ ಪಟ್ಟಿ ಹಾಗೂ ಅಂದಾಜು ವೆಚ್ಚದ ವಿವರ ನೀಡುವಂತೆ ಅದೇಶ ನೀಡಲಾಗಿದೆ. 2023-24 ನೇ ಸಾಲಿನಲ್ಲಿ ಸರ್ಕಾರದ ಅನುದಾನದಲ್ಲಿ ಕೈಗೊಂಡ ಸಾಧನೆ ಪಟ್ಟಿ ಸಲ್ಲಿಕೆಗೂ ಸೂಚನೆ ನೀಡಲಾಗಿದೆ.

ಎರಡು ದಿನಗಳಲ್ಲಿ ಎಲ್ಲಾ ವಲಯಗಳ ಮಾಹಿತಿ ಸಂಗ್ರಹಿಸಿ ಅನ್​ಲೈನ್ ಮುಖಾಂತರ ಸಲ್ಲಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಬಿಬಿಎಂಪಿಗೆ ಚುನಾವಣೆ ನಡೆದು ನಾಲ್ಕು ವರ್ಷಗಳು ಮುಗಿಯುತ್ತಿರುವ ಸಂದರ್ಭದಲ್ಲಿ ಅಧಿಕಾರಿಗಳೇ ನಾಲ್ಕನೇ ಬಾರಿಗೆ ಬಿಬಿಎಂಪಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಪಾಲಿಕೆಯಲ್ಲಿ ಜನಪ್ರತಿನಿಧಿಗಳು ಇಲ್ಲದ ಕಾರಣ ಬಿಬಿಎಂಪಿಯ ಹಣಕಾಸು ವಿಭಾಗದ ಮುಖ್ಯಸ್ಥರೇ ಬಜೆಟ್ ಮಂಡಿಸುತ್ತಿದ್ದಾರೆ.

ಇದನ್ನೂ ಓದಿ:ಫೆ.28ರೊಳಗೆ ವಾಣಿಜ್ಯ ಮಳಿಗೆಗಳಲ್ಲಿ ಕನ್ನಡದ ನಾಮಫಲಕ ಕಡ್ಡಾಯ: ಬಿಬಿಎಂಪಿ

ABOUT THE AUTHOR

...view details