ಕರ್ನಾಟಕ

karnataka

ETV Bharat / state

ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಆಸ್ಪತ್ರೆಗೆ ದಾಖಲು: ವಿ ಸೋಮಣ್ಣ ಭೇಟಿ - ವಸತಿ ಸಚಿವ

ಜ್ವರದಿಂದ ಬಳಲುತ್ತಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ, ಆರೋಗ್ಯ ವಿಚಾರಿಸಿದ ವಸತಿ ಸಚಿವ ವಿ. ಸೊಮ್ಮಣ್ಣ

bbmp chief commissioner admitted to hospital
ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಆಸ್ಪತ್ರೆಗೆ ದಾಖಲು: ವಿ ಸೋಮಣ್ಣ ಭೇಟಿ

By

Published : Dec 1, 2022, 9:38 PM IST

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಅನಾರೋಗ್ಯದಿಂದಾಗಿ ಬಳಲುತ್ತಿರುವ ಬಿಬಿಎಂಪಿ ಆಯುಕ್ತ ಗಿರಿನಾಥ್​ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು, ಜ್ವರ ಕಡಿಮೆಯಾದ ಹಿನ್ನೆಲೆಯಲ್ಲಿ ನಗರದ ಕನ್ನಿಂಗ್‌ಹ್ಯಾಂ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ ಶನಿವಾರದಿಂದ ಹೊಟ್ಟೆ ನೋವಿನ ಸಮಸ್ಯೆ ಅನುಭವಿಸುತ್ತಿದ್ದರು, ಪರಿಶೀಲಿಸಿದಾಗ ಯೂರಿನರಿ ಇನ್‌ಫೆಕ್ಷನ್ ಇರುವುದು ಪತ್ತೆಯಾಗಿತ್ತು. ಮನೆಯಲ್ಲೇ ಔಷಧ ನೀಡಲಾಗಿತ್ತು. ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಂದರೆಡು ದಿನದಲ್ಲಿ ಮನೆಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ. ಆಯುಕ್ತರ ಆಪ್ತ ವಲಯದಿಂದ ಮಾಹಿತಿ ಸಿಕ್ಕಿದೆ.

ಸಚಿವ ವಿ ಸೋಮಣ್ಣ ಭೇಟಿ: ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದು ವಸತಿ ಸಚಿವ ವಿ.ಸೋಮಣ್ಣ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಇದನ್ನೂ ಓದಿ:ಲಿಂಕ್ ಕಳಿಸಿ ಒಂದೇ ದಿನ ಹತ್ತಾರು ಖಾತೆಗಳಿಗೆ ಕನ್ನ ಹಾಕಿದ ಸೈಬರ್ ವಂಚಕರು

ABOUT THE AUTHOR

...view details