ಬೆಂಗಳೂರು:ರಾಜ್ಯದಲ್ಲಿ ಮತದಾರರ ಮಾಹಿತಿ ಕಳವು ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕರಡು ಮತದಾರರ ಪಟ್ಟಿಯ ಪರಿಶೀಲನೆ ನಡೆಸಿದರು.
ನಗರದಲ್ಲಿಂದು ವಿವಿಧ ವಿಧಾನಸಭಾ ಕ್ಷೇತ್ರಗಳ ವಾರ್ಡ್ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಾರ್ವಜನಿಕರು, ಮತದಾರರು ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಕೈಗೊಂಡಿರುವ ವಿಶೇಷ ಅಭಿಯಾನವನ್ನು ಸದುಪಯೋಗ ಪಡಿಸಿಕೊಳ್ಳಲು ಮನವಿ ಮಾಡಿದರು.