ಬೆಂಗಳೂರು:ಶಾಲಾ - ಕಾಲೇಜು ಭೌತಿಕ ತರಗತಿಗಳು ಪ್ರಾರಂಭವಾಗಿರುವ ಹಿನ್ನೆಲೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ಶಾಲಾ ಆಡಳಿತ ಮಂಡಳಿ ಕಟ್ಟೆಚ್ಚರ ವಹಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚಿಸಿದ್ದಾರೆ.
ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ ಸೋಂಕು ನಿಯಂತ್ರಣಗೊಂಡಿರುವುದರಿಂದ ಶಾಲಾ - ಕಾಲೇಜುಗಳ ಭೌತಿಕ ತರಗತಿಗಳು ಪುನಾರಂಭಗೊಂಡಿವೆ. ಪೋಷಕರು ಈ ಬಗ್ಗೆ ಎಚ್ಚರ ವಹಿಸಿ, ಮಕ್ಕಳ ಆರೋಗ್ಯದ ಮೇಲೆ ಗಮನವಿಡಬೇಕು. ಹಾಗೆಯೇ, ಆಡಳಿತ ಮಂಡಳಿಗಳು ಕೂಡ ಮುನ್ನೆಚ್ಚರಿಕೆ ವಹಿಸಬೇಕು ಎಂದರು.