ಬೆಂಗಳೂರು: ಕೊರೊನಾ ಸೋಂಕಿನ ಸಂಖ್ಯೆ ಏರುತ್ತಿರುವ ಹಿನ್ನೆಲೆ ಬಿಬಿಎಂಪಿಯ ಕೇಂದ್ರ ಕಚೇರಿಗೆ ಸಾರ್ವಜನಿಕರು ಭೇಟಿ ಮಾಡಲು ಮಧ್ಯಾಹ್ನ 3ರಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಅವಕಾಶ ನೀಡಿ ಬಿಬಿಎಂಪಿ ಅಧಿಕೃತ ಆದೇಶ ಹೊರಡಿಸಿದೆ.
ಪಾಲಿಕೆ ಕೇಂದ್ರ ಕಚೇರಿ ಪ್ರವೇಶಕ್ಕೆ ನಿರ್ಬಂಧ: ನಿಗದಿತ ಸಮಯದಲ್ಲಿ ಮಾತ್ರ ಪ್ರವೇಶಾವಕಾಶ - ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ
ಪಾಲಿಕೆಯ ಕೇಂದ್ರ ಕಚೇರಿಗೆ ಜನಪ್ರತಿನಿಧಿಗಳು, ಬಿಬಿಎಂಪಿ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಮಾಧ್ಯಮದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಆದೇಶ ಹೊರಡಿಸಿದ್ದಾರೆ.
ಕೊರೊನಾ ಸೋಂಕು ವ್ಯಾಪಿಸುವುದನ್ನು ತಡೆಯುವ ನಿಟ್ಟಿನಲ್ಲಿ ಈಗಾಗಲೇ ಪಾಲಿಕೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಜನದಟ್ಟಣೆ ತಪ್ಪಿಸುವುದು ಹಾಗೂ ಸಾಮಾಜಿಕ ಅಂತರವನ್ನು ಪಾಲನೆ ಮಾಡುವ ಉದ್ದೇಶದಿಂದ ಮುಂದಿನ ಆದೇಶದವರೆಗೆ ಪಾಲಿಕೆಯ ಕೇಂದ್ರ ಕಚೇರಿಗೆ ಮಧ್ಯಾಹ್ನ 3ರಿಂದ ಸಂಜೆ 5 ಗಂಟೆಯವರೆಗಿನ ಅವಧಿಯನ್ನು ಹೊರತುಪಡಿಸಿ ಇನ್ಯಾವುದೇ ಸಮಯದಲ್ಲಿ ಭೇಟಿಗೆ ಅವಕಾಶ ನೀಡಿವುದಿಲ್ಲ.
ಸದ್ಯಕ್ಕೆ ಈ ನಿಯಮ ಮುಂದಿನ ಆದೇಶದ ವರೆಗೆ ಪಾಲಿಸಲಾಗುತ್ತದೆ. ಪಾಲಿಕೆಯ ಕೇಂದ್ರ ಕಚೇರಿಗೆ ಜನಪ್ರತಿನಿಧಿಗಳು, ಬಿಬಿಎಂಪಿ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಮಾಧ್ಯಮದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಆದೇಶ ಹೊರಡಿಸಿದ್ದಾರೆ.