ಕರ್ನಾಟಕ

karnataka

ETV Bharat / state

ರಸ್ತೆ ಗುಂಡಿ ಕುರಿತು ಹೈಕೋರ್ಟ್​ಗೆ ಸಂಕ್ಷಿಪ್ತ ದಾಖಲೆ ಸಲ್ಲಿಸಲಾಗಿದೆ: ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ - ಬಿಬಿಎಂಪಿ ರಸ್ತೆ ಗುಂಡಿ ಸಂಬಂಧ ಹೈಕೋರ್ಟ್ನಲ್ಲಿ ಇಂದು ವಿಚಾರಣೆ

ಬಿಬಿಎಂಪಿ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು ಏನಾದರೂ ಕಷ್ಟಗಳಿವೆಯೇ? ರಸ್ತೆ ಗುಂಡಿಗಳಿಂದ ಬೆಂಗಳೂರಿಗೆ ಕೆಟ್ಟ ಹೆಸರು ಬರುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ನ್ಯಾಯಾಲಯ ಛೀಮಾರಿ ಹಾಕಿದೆ.

ರಸ್ತೆ ಗುಂಡಿ ಕುರಿತು ಹೈ ಕೋರ್ಟ್​ಗೆ ಸಂಕ್ಷಿಪ್ತ ದಾಖಲೆ ಸಲ್ಲಿಸಲಾಗಿದೆ ಎಂದ  ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ರಸ್ತೆ ಗುಂಡಿ ಕುರಿತು ಹೈ ಕೋರ್ಟ್​ಗೆ ಸಂಕ್ಷಿಪ್ತ ದಾಖಲೆ ಸಲ್ಲಿಸಲಾಗಿದೆ ಎಂದ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

By

Published : Jun 30, 2022, 3:52 PM IST

ಬೆಂಗಳೂರು: ನಗರದ ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್​ನಲ್ಲಿಂದು ವಿಚಾರಣೆ ನಡೆಯಿತು. ಕೋರ್ಟ್​ ಮುಂದೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ಹಾಜರಾಗಿದ್ದರು. ರಸ್ತೆ ಗುಂಡಿಗಳನ್ನು ಮುಚ್ಚಿರುವ ಕುರಿತು ಸಂಕ್ಷಿಪ್ತ ದಾಖಲೆ ಸಲ್ಲಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ಮುಂದೆ ನಮ್ಮ ಬಳಿ ಇರುವ ಎಲ್ಲಾ ಮಾಹಿತಿ ಕೊಟ್ಟಿದ್ದೇವೆ. ಆದರೆ, ಹಲವು ಕಾರಣಗಳಿಂದ ಕಾರ್ಯಾದೇಶ ಮಾಡಲು ಸಾಧ್ಯ ಆಗಿರಲಿಲ್ಲ. ಪೈಥಾನ್ ಸಂಸ್ಥೆಯ ಜೊತೆ ದರದ ಬಗ್ಗೆ ಮಾತುಕತೆ ನಡೆದಿದೆ. ಹೀಗಾಗಿ ತಡವಾಗಿದೆ. ನಿನ್ನೆ ಪೈಥಾನ್ ಬಳಸಿ ರಸ್ತೆ ಗುಂಡಿ ಮುಚ್ಚುವ ಬಗ್ಗೆ ಕಾರ್ಯಾದೇಶ ಮಾಡಲಾಗಿದೆ. ಲಿಖಿತ ರೂಪದಲ್ಲಿ ಇನ್ನೂ ಹೈ ಕೋರ್ಟ್ ಗೆ ಮಾಹಿತಿ ಕೊಟ್ಟಿಲ್ಲ ಎಂದು ವಿವರಿಸಿದರು.

10 ದಿನಗಳ ಒಳಗಾಗಿ ಮಾಹಿತಿ ದಾಖಲಾತಿ ಮಾಡಿಕೊಡುತ್ತೇವೆ. ಎಲ್ಲ ಮಾಹಿತಿಯನ್ನು ನಾವು ಕಡತ ಮಾಡಿ ತೆಗೆದುಕೊಂಡು‌ ಹೋಗಿದ್ದೆವು. ಆದರೆ, ಪ್ರಕ್ರಿಯೆ ಸರಿ ಇಲ್ಲ ಎಂದು 10 ದಿನಗಳಲ್ಲಿ ಕೊಡುವಂತೆ ಕೋರ್ಟ್ ಹೇಳಿದೆ. ತ್ವರಿತಗತಿಯಲ್ಲಿ ರಸ್ತೆ ಗುಂಡಿ ಮುಚ್ಚಲು ನ್ಯಾಯಾಲಯ ಸೂಚಿಸಿದೆ ಎಂದು ಮಾಹಿತಿ ನೀಡಿದರು.

ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಹೈಕೋರ್ಟ್ ಛೀಮಾರಿ: ಇಂದು ವಿಚಾರಣೆ ನಡೆಸಿರುವ ಹೈಕೋರ್ಟ್, ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು ಏನಾದರೂ ಕಷ್ಟಗಳಿವೆಯೇ? ರಸ್ತೆ ಗುಂಡಿಗಳಿಂದ ಬೆಂಗಳೂರಿಗೆ ಕೆಟ್ಟ ಹೆಸರು ಬರುತ್ತಿದೆ. ಇದನ್ನು ಬಿಬಿಎಂಪಿ ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು. ಪಿಎಂ ಬಂದಾಗ ಮಾಡಿದ ರಸ್ತೆಗಳು ಹಾಳಾಗಿರುವ ವರದಿಗಳಿವೆ ಎಂದು ಗರಂ ಆಯಿತು.

ಹೈಕೋರ್ಟ್ ಆಕ್ಷೇಪಗಳಿಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಮುಖ್ಯ ಆಯುಕ್ತರ ಪರ ವಕೀಲರಾದ ಶ್ರೀನಿಧಿ ಅವರು, ಪ್ರಧಾನಿ ಭೇಟಿ ವೇಳೆ ನಿರ್ಮಿಸಿದ್ದ ರಸ್ತೆಗಳು ಹಾಳಾಗಿಲ್ಲ. ಒಳಚರಂಡಿ ಸಮಸ್ಯೆಯಿಂದ ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಲಾಗಿದೆ ಎಂದು ಕೋರ್ಟ್ ಗೆ ಮಾಹಿತಿ ನೀಡಿದರು.

ಜಂಟಿ ಸಮೀಕ್ಷೆಯ ಪ್ರಕಾರ, 847.56 ಕಿಮೀ ರಸ್ತೆಯಲ್ಲಿರುವ ಗುಂಡಿಗಳನ್ನು ಸರಿಪಡಿಸಬೇಕಿದೆ. ಈ ಪೈಕಿ 576 ಕಿ.ಮೀ. ರಸ್ತೆ ಗುಂಡಿ ಮುಚ್ಚಲು ಟೆಂಡರ್ ಕರೆಯಲಾಗಿದೆ. 397 ಕಿ.ಮೀ. ರಸ್ತೆಯಲ್ಲಿ ಗುಂಡಿಗಳ ರಿಪೇರಿಗೆ ಕಾರ್ಯಾದೇಶ ನೀಡಲಾಗಿದೆ. ಜುಲೈ 15ರಂದು ಟೆಂಡರ್ ತೆರೆಯಲಾಗುವುದು ಎಂದು ಹೇಳಿದರು.

ಮುಂದಿನ ತಿಂಗಳು 27ಕ್ಕೆ ವಿಚಾರಣೆ ಮುಂದೂಡಿಕೆ: ಬೆಂಗಳೂರಿನ ರಸ್ತೆಗಳು ಸರಿಯಾಗುವವರೆಗೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಗಿಸುವುದಿಲ್ಲ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರು ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಿದರು.

ಇದನ್ನೂ ಓದಿ:ಮದ್ಯ ಕುಡಿಯಲು ಹಣ ನೀಡದ್ದಕ್ಕೆ ಸಿಟ್ಟು.. ಮೈಸೂರಲ್ಲಿ ಸಾಕು ತಾಯಿಯನ್ನ ಕೊಚ್ಚಿ ಕೊಂದ ಮಗ!

For All Latest Updates

TAGGED:

ABOUT THE AUTHOR

...view details