ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಘನತ್ಯಾಜ್ಯ ವಿಲೇವಾರಿ ಮಾಡುವ ಸಂಬಂಧ ರಾಧಾಕೃಷ್ಣ ವಾರ್ಡ್ -18 ರ ವ್ಯಾಪ್ತಿಯಲ್ಲಿ ಟ್ರಾನ್ಸ್ ಫರ್ ಸ್ಟೇಷನ್ ಸ್ಥಾಪಿಸಲಾಗಿದ್ದು, ಇಂದು ಬಿಬಿಎಂಪಿ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಕಸ ನಿರ್ವಹಣೆ ಮಾಡುವ ದೃಷ್ಟಿಯಿಂದ ಟ್ರನ್ಸ್ ಫರ್ ಸ್ಟೇಷನ್ ಗಳನ್ನು ವೈಜ್ಞಾನಿಕವಾಗಿ ಸ್ಥಾಪಿಸಲಾಗಿದ್ದು, ಟ್ರಾನ್ಸ್ ಫರ್ ಸ್ಟೇಷನ್ ನಲ್ಲಿ ತ್ಯಾಜ್ಯವನ್ನು ಸಂಗ್ರಹಿಸಿ, ನಂತರ ಟ್ರಕ್ ಮೂಲಕ ವಿಲೇವಾರಿ ಮಾಡಲಾಗುತ್ತದೆ ಎಂದು ಮಂಜುನಾಥ್ ಪ್ರಸಾದ್ ತಿಳಿಸಿದರು.