ಬೆಂಗಳೂರು: ವರ್ತೂರು ರಸ್ತೆಯ ಫ್ಲೋರ್ ಮಿಲ್ ಮುಂಭಾಗ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ-ಮಗು ರಸ್ತೆ ಗುಂಡಿಗೆ ಬಿದ್ದು ಗಂಭೀರ ಗಾಯಗೊಂಡ ಹಿನ್ನೆಲೆ ಸರಿಯಾಗಿ ರಸ್ತೆ ಗುಂಡಿ ಮುಚ್ಚದೆ ನಿರ್ಲಕ್ಷ್ಯ ತೋರಿದ್ದ ಅಧಿಕಾರಿಯನ್ನು ಬಿಬಿಎಂಪಿ ಆಯುಕ್ತರು ಅಮಾನತು ಮಾಡಿದ್ದಾರೆ.
ರಸ್ತೆ ಗುಂಡಿಯಿಂದ ಅಪಘಾತ: ಎಂಜಿನಿಯರ್ ಅಮಾನತು - ಬೆಂಗಳೂರು ಸುದ್ದಿ
ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ-ಮಗು ರಸ್ತೆ ಗುಂಡಿಗೆ ಬಿದ್ದು ಗಂಭೀರ ಗಾಯಗೊಂಡ ಹಿನ್ನೆಲೆ ಸರಿಯಾಗಿ ರಸ್ತೆ ಗುಂಡಿ ಮುಚ್ಚದೆ ನಿರ್ಲಕ್ಷ್ಯ ತೋರಿದ್ದ ಅಧಿಕಾರಿಯನ್ನು ಬಿಬಿಎಂಪಿ ಆಯುಕ್ತರು ಅಮಾನತು ಮಾಡಿದ್ದಾರೆ. ಆಯುಕ್ತರ ಈ ಕ್ರಮಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ.
ಬಿಬಿಎಂಪಿ ಆಯುಕ್ತ ಬಿ.ಹೆಚ್ ಅನಿಲ್ ಕುಮಾರ್
ಅಲ್ಲದೆ ಪೈಪ್ಲೈನ್ ಕಾಮಗಾರಿಯಿಂದ ಹಾಳಗಿದ್ದ ರಸ್ತೆಯನ್ನು ಕೂಡಲೇ ದುರಸ್ತಿ ಮಾಡಲು ಸೂಚಿಸಿರುವುದಾಗಿ ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಅಲ್ಲದೆ ನಿರ್ಲಕ್ಷ್ಯ ತೋರಿದ ಅಧಿಕಾರಿಯನ್ನು ಅಮಾನತು ಮಾಡಿರುವುದಾಗಿಯೂ ಕುಡಾ ಟ್ವೀಟ್ನಲ್ಲಿ ತಿಳಿಸಿದ್ದಾರೆ. ಆಯುಕ್ತರ ಈ ಕ್ರಮಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.